ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ಪೆಟ್ರೋಲ್ ಬೆಲೆ ಇಳಿಕೆಗೆ ಆಗ್ರಹ

Published 22 ಜೂನ್ 2024, 4:42 IST
Last Updated 22 ಜೂನ್ 2024, 4:42 IST
ಅಕ್ಷರ ಗಾತ್ರ

ತುಮಕೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ ಮಾಡುವಂತೆ ಜಿಲ್ಲಾ ಲಾರಿ ಮಾಲೀಕರ ಸಂಘ ಒತ್ತಾಯಿಸಿದೆ. ಈ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಸಂಘದ ಪದಾಧಿಕಾರಿಗಳು ಶುಕ್ರವಾರ ಮನವಿ ಸಲ್ಲಿಸಿದರು.

ಪ್ರಸ್ತುತ ಸಂಕಷ್ಟದಲ್ಲಿರುವ ಲಾರಿ ಉದ್ಯಮಕ್ಕೆ ಬೆಲೆ ಏರಿಕೆ ದೊಡ್ಡ ಪೆಟ್ಟು ನೀಡಿದ್ದು, ಮತ್ತಷ್ಟು ಸಂಕಷ್ಟಕ್ಕೀಡುಮಾಡಿದೆ ಎಂದು ಸಂಘದ ಅಧ್ಯಕ್ಷ ಟಿ.ಜಿ.ಚನ್ನಬಸವ ಪ್ರಸನ್ನ ಹೇಳಿದ್ದಾರೆ.

ಕಳೆದ ವರ್ಷ ಬರಗಾಲದಿಂದ ಲಾರಿ ಉದ್ಯಮ ತತ್ತರಿಸಿದೆ. ಈಗಾಗಲೇ ಪ್ಯಾನಿಕ್ ಬಟನ್ ಅಳವಡಿಸಬೇಕಾದ ಹೊರೆ ಲಾರಿ ಮಾಲೀಕರ ಮೇಲಿದೆ. ಸಾಗಾಣಿಕೆ ವೆಚ್ಚವೂ ಅಧಿಕವಾಗಿದೆ. ಕಳೆದ ಬಜೆಟ್‌ನಲ್ಲಿ ರಸ್ತೆ ತೆರಿಗೆ ಮೇಲೆ ಶೇ 3ರಷ್ಟು ಸೆಸ್ ಹೆಚ್ಚು ಮಾಡಲಾಗಿದೆ. ಈ ಎಲ್ಲಾ ಹೆಚ್ಚುವರಿ ವೆಚ್ಚಗಳನ್ನು ಬಾಡಿಗೆಯಲ್ಲಿ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಸಂಘದ ಉಪಾಧ್ಯಕ್ಷ ಅಶೋಕ್‍ ಕುಮಾರ್ ಜೈನ್, ಕಾರ್ಯದರ್ಶಿ ಶೌಕತ್ ಉಲ್ಲಾ ಖಾನ್, ಜಂಟಿ ಕಾರ್ಯದರ್ಶಿ ಟಿ.ಎಸ್.ನಾಗಭೂಷಣ ಆರಾಧ್ಯ, ನಿರ್ದೇಶಕರಾದ ಟಿ.ಆರ್.ಸದಾಶಿವಯ್ಯ, ಟಿ.ಎಸ್.ಸುರೇಶ್, ಜಿ.ಸಿ.ನಾಗರಾಜು ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT