ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರ ಕೆಲಸದ ಅವಧಿ ಕಡಿತಕ್ಕೆ ಒತ್ತಾಯ

Published 5 ಮೇ 2024, 6:04 IST
Last Updated 5 ಮೇ 2024, 6:04 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಮುನಿಸಿಪಲ್‌ ಕಾರ್ಮಿಕರ ಕೆಲಸದ ಅವಧಿ ಕಡಿತಗೊಳಿಸುವಂತೆ ಸಿಐಟಿಯು ಒತ್ತಾಯಿಸಿದೆ.

ಹೆಚ್ಚಿದ ಬಿಸಿಲು ಜನರ ಆರೋಗ್ಯದ ಮೇಲೆ ಸಾಕಷ್ಟು ಅಡ್ಡ ಪರಿಣಾಮ ಉಂಟು ಮಾಡುತ್ತಿದೆ. ಬೆಳಗ್ಗೆ 10 ಗಂಟೆಯ ನಂತರ ಕೆಲಸ ಮಾಡಲು ಆಗದಂತಹ ಪರಿಸ್ಥಿತಿ ಇದೆ. ಮಹಾನಗರ, ನಗರ, ಪಟ್ಟಣಗಳಲ್ಲಿ ಬೆಳಗ್ಗೆ 10 ಗಂಟೆಯ ತನಕ ಮಾತ್ರ ಕೆಲಸ ಮಾಡಲು ಸಮಯ ನಿಗದಿ ಪಡಿಸಬೇಕು ಎಂದು ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್‌ ಮುಜೀಬ್‌, ಪ್ರಧಾನ ಕಾರ್ಯದರ್ಶಿ ಎನ್‌.ಕೆ.ಸುಬ್ರಮಣ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ, ನಗರಾಭಿವೃದ್ಧಿ, ಪೌರಾಡಳಿತ ಸಚಿವರು, ಇಲಾಖೆಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ. ಜಿಲ್ಲಾಧಿಕಾರಿ ಮುಖಾಂತರ ಪೌರಾಡಳಿತ ನಿರ್ದೇಶಕರಿಗೂ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

‘ಬಿಸಿಲಿನ ತಾಪಮಾನದಿಂದ ‘ಹೀಟ್‌ ಸ್ಟ್ರೋಕ್‌’ ಹೆಚ್ಚಾಗುವ ಸಂಭವ ಇರುತ್ತದೆ. ಈ ಸಂಬಂಧ ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಏಪ್ರಿಲ್‌ನಲ್ಲಿ ನೀಡಿರುವ ಸ್ಪಷ್ಟ ಮಾರ್ಗಸೂಚಿಗಳ ಜಾರಿಗೆ ಕ್ರಮ ವಹಿಸಬೇಕು. ಹೊರಗೆ ಕೆಲಸ ಮಾಡುವ ಕಾರ್ಮಿಕರಿಗೆ ಕಡ್ಡಾಯವಾಗಿ 4 ಲೀಟರ್‌ ಶುದ್ಧ ಕುಡಿಯುವ ನೀರು ವಿತರಿಸಬೇಕು. ವಿಶ್ರಾಂತಿಗೆ ಬೇಕಾದ ಅಗತ್ಯ ವ್ಯವಸ್ಥೆ ಮಾಡಬೇಕು. ಪಾಳಿ ಲೆಕ್ಕದಲ್ಲಿ ಕೆಲಸಕ್ಕೆ ನಿಯೋಜಿಸಬೇಕು. ಕಾರ್ಮಿಕರಲ್ಲಿ ಅರಿವು ಮೂಡಿಸಬೇಕು’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT