ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕಿ ವೇತನ ಬಿಡುಗಡೆಗೆ ಆಗ್ರಹ

ಡಾಟಾ ಎಂಟ್ರಿ ಆಪರೇಟರ್‌ಗಳಿಂದ ಮನವಿ
Published 10 ಜನವರಿ 2024, 8:25 IST
Last Updated 10 ಜನವರಿ 2024, 8:25 IST
ಅಕ್ಷರ ಗಾತ್ರ

ತುಮಕೂರು: ಬಾಕಿ ಇರುವ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ಡಾಟಾ ಎಂಟ್ರಿ ಆಪರೇಟರ್‌ಗಳು ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಮನವಿ ಸಲ್ಲಿಸಿದರು.

ಇತ್ತೀಚೆಗೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ನಾಡ ಕಚೇರಿಯ ಡಾಟಾ ಎಂಟ್ರಿ ಆಪರೇಟರ್ ಪರಮೇಶ್‌ ತಮ್ಮ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೆ ಕಾರಣರಾದ ಉಪತಹಶೀಲ್ದಾರ್‌ ಎಂ.ಪಿ.ಶಿವಕುಮಾರ್ ಅಮಾನತುಗೊಳಿಸಬೇಕು ಎಂದು ಡಾಟಾ ಎಂಟ್ರಿ ಆಪರೇಟರ್ಸ್ ಒತ್ತಾಯಿಸಿದರು.

ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಆಗುತ್ತಿರುವ ತೊಂದರೆ, ಹಿಂಸೆಗೆ ಕಡಿವಾಣ ಹಾಕಬೇಕು. ಎಲ್ಲ ನಾಡ ಕಚೇರಿಯ ಆಪರೇಟರ್‌ಗಳಿಗೆ ಭದ್ರತೆ ಒದಗಿಸಿ ಸೂಕ್ತ ರಕ್ಷಣೆ ಕೊಡಬೇಕು. ಸಂಬಳ ಇಲ್ಲದೆ ಆಪರೇಟರ್‌ಗಳು ಜೀವನ ನಡೆಸಲು ಸಂಕಷ್ಟ ಅನುಭವಿಸುತ್ತಿದ್ದಾರೆ. ಸುಮಾರು 10 ತಿಂಗಳಿನಿಂದ ಬಾಕಿ ಇರುವ ವೇತನ ಬಿಡುಗಡೆಗೊಳಿಸಬೇಕು. ಪ್ರತಿ ತಿಂಗಳು ಸರಿಯಾಗಿ ಸಂಬಳ ನೀಡಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT