ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 50 ಲಕ್ಷ ಪರಿಹಾರಕ್ಕೆ ಆಗ್ರಹ

Last Updated 23 ಏಪ್ರಿಲ್ 2020, 13:49 IST
ಅಕ್ಷರ ಗಾತ್ರ

ತುಮಕೂರು: ಗುಬ್ಬಿಯ ಕೆಎಂಎಫ್‌ ಪಶು ಆಹಾರ ಉತ್ಪಾದನಾ ಘಟಕದಲ್ಲಿ ಯಂತ್ರಕ್ಕೆ ಸಿಲುಕಿ ಮೃತಪಟ್ಟ ಕಾರ್ಮಿಕರಾದ ಮಂಗಳಗೌರಮ್ಮ ಅವರ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ನೀಡಬೇಕು ಎಂದು ಸಿಐಟಿಯು ಆಗ್ರಹಿಸಿದೆ.

ಸಾವಿಗೆ ಸೂಪರ್ ವೈಸರ್ ರವಿ ನಿರ್ಲಕ್ಷ್ಯವೇ ಕಾರಣ. ಮಂಗಳಗೌರಮ್ಮ ಅವರಿಗೆ ಬರಬೇಕಾದ ಪಿಎಫ್ ಹಣವನ್ನು ಕೂಡಲೇ ನೀಡಬೇಕು. ಮಹಿಳಾ ಕಾರ್ಮಿಕರಿಗೆ ಕಿರುಕುಳ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಿಐಟಿಯು ಜಿಲ್ಲಾ ಖಜಾಂಚಿ ಷಣ್ಮುಗಪ್ಪ ಒತ್ತಾಯಿಸಿದ್ದಾರೆ.

ಇಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸುರಕ್ಷಾ ಸಲಕರಣೆಗಳನ್ನು ನೀಡಿಲ್ಲ. ಈ ಬಗ್ಗೆ ಮೂಲ ಮಾಲೀಕರು ಗಮನಹರಿಸಬೇಕು. ಕೆಎಂಎಫ್ ಆಡಳಿತ ಮಂಡಳಿ ₹ 5 ಲಕ್ಷ ಹಾಗೂ ಗುತ್ತಿಗೆದಾರರು ₹ 5 ಲಕ್ಷ ಪರಿಹಾರ ನೀಡಲು ಒಪ್ಪಿದ್ದಾರೆ. ಸೋಮವಾರ ಪರಿಹಾರ ನೀಡಲಿದ್ದಾರೆ ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT