ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ₹ 1 ಸಾವಿರ ಕೋಟಿ ಅನುದಾನಕ್ಕೆ ಒತ್ತಾಯ

Published 7 ಏಪ್ರಿಲ್ 2024, 4:45 IST
Last Updated 7 ಏಪ್ರಿಲ್ 2024, 4:45 IST
ಅಕ್ಷರ ಗಾತ್ರ

ತುಮಕೂರು: ಸಾಂಸ್ಕೃತಿಕ ಸಂಘಟನೆಗಳಿಗೆ ಬಾಕಿ ಇರುವ ಧನ ಸಹಾಯ ಬಿಡುಗಡೆ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾಂಸ್ಕೃತಿಕ ಸಂಘಟನೆಗಳ ರಾಜ್ಯ ಮಹಾ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

‘ಕ್ರಿಯಾ ಯೋಜನೆಯಲ್ಲಿ ಸಾಂಸ್ಕೃತಿಕ ಸಂಘಟನೆಗಳಿಗೆ ನಿಗದಿ ಪಡಿಸಿದ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಬಾರದು. ಪ್ರತಿ ವರ್ಷ ಒಂದು ಜಿಲ್ಲೆಗೆ ₹3 ಕೋಟಿಯಂತೆ ರಾಜ್ಯದ 31 ಜಿಲ್ಲೆಗಳಿಗೆ ₹93 ಕೋಟಿ ಹಣವನ್ನು ಮೀಸಲಿಡಬೇಕು’ ಎಂದು ಒಕ್ಕೂಟದ ಅಧ್ಯಕ್ಷ ವೀರೇಶ ಪ್ರಸಾದ ಒತ್ತಾಯಿಸಿದರು.

ಸಾಂಸ್ಕೃತಿಕ ಸಂಘ–ಸಂಸ್ಥೆಗಳ ಸಹಾಯ ಧನದ ಕನಿಷ್ಠ ಮಿತಿ ₹3 ಲಕ್ಷ, ಗರಿಷ್ಠ ₹10 ಲಕ್ಷ ನಿಗದಿ ಮಾಡಬೇಕು. ವಯೋವೃದ್ಧ ಕಲಾವಿದರ ಮಾಸಾಶನ ₹5 ಸಾವಿರಕ್ಕೆ ಹೆಚ್ಚಿಸಬೇಕು. ಕಲಾವಿದರಿಗೆ ವಸತಿ, ನಿವೇಶನ ಸೌಲಭ್ಯ ಕಲ್ಪಿಸಬೇಕು. ವಾದ್ಯ ಪರಿಕರ, ವೇಷಭೂಷಣ ಖರೀದಿಗೆ ಅರ್ಜಿ ಸ್ವೀಕರಿಸಬೇಕು. ಬಜೆಟ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ₹1 ಸಾವಿರ ಕೋಟಿ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.

ಒಕ್ಕೂಟದ ಸಭೆ: ಸಾಂಸ್ಕೃತಿಕ ಸಂಘಟನೆಗಳ ರಾಜ್ಯ ಮಹಾ ಒಕ್ಕೂಟದ ವತಿಯಿಂದ ನಗರದಲ್ಲಿ ಶುಕ್ರವಾರ ಸಭೆ ನಡೆಯಿತು. ಒಕ್ಕೂಟದ ಅಧ್ಯಕ್ಷ ವೀರೇಶ ಪ್ರಸಾದ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್‌.ಸಿದ್ಧಲಿಂಗಪ್ಪ, ಹರಿಕಥಾ ವಿದ್ವಾನ್‌ ಲಕ್ಷ್ಮಣದಾಸ್‌, ಜನಪದ ಅಕಾಡೆಮಿ ಸದಸ್ಯ ಕೆಂಕೆರೆ ಮಲ್ಲಿಕಾರ್ಜುನ್‌, ಲಲಿತ ಕಲಾ ಅಕಾಡೆಮಿ ಸದಸ್ಯ ಮನು ಚಕ್ರವರ್ತಿ, ಮುಖಂಡರಾದ ಗೂಳೆಹರಿವೆ ಪರಮಯ್ಯ, ದೇವೀರಯ್ಯ, ಕೆಂಪಣ್ಣ, ಬಲರಾಮ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT