ಮಧುಗಿರಿ: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಡಿವೈಎಸ್ಪಿ ಅವರನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್– 2 ತಹಶೀಲ್ದಾರ್ ಶ್ರೀನಿವಾಸ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಮಾತನಾಡಿ, ಡಿವೈಎಸ್ಪಿ ಕಚೇರಿಯಲ್ಲೇ ದೂರು ನೀಡಲು ಬಂದಿದ್ದ ಮಹಿಳೆಯೇ ಮೇಲೆ ಡಿವೈಎಸ್ಪಿ ಲೈಂಗಿಕ ದೌರ್ಜನ್ಯ ಎಸಗಿರುವುದು ಖಂಡನೀಯ. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ನ್ಯಾಯ ಕೇಳಲು ಬಂದ ಮಹಿಳೆಯನ್ನೇ ನ್ಯಾಯ ಕೊಡಿಸುವುದಾಗಿ ಹೇಳಿ ಲೈಂಗಿಕ ಕೃತ್ಯಕ್ಕೆ ಬಳಸಿಕೊಂಡಿರುವ ಡಿವೈಎಸ್ಪಿ ಅವರನ್ನು ಅಮಾನತು ಪಡಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷ ಪೂರ್ಣಿಮಾ ಪ್ರಕಾಶ್, ಬಿಜೆಪಿಯ ಬಿ.ಕೆ. ಮಂಜುನಾಥ್, ಅನಿಲ್ ಕುಮಾರ್, ವೆಂಕಟರಮಣಪ್ಪ, ರುದ್ರೇಶ್, ಶ್ರೀನಿವಾಸ್, ಮೂರ್ತಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.