ಬುಧವಾರ, ಜನವರಿ 29, 2020
24 °C

ಮೂಡಲಪಾಯ ಯಕ್ಷಗಾನ ಅಕಾಡೆಮಿ ಸ್ಥಾಪನೆಗೆ ಒತ್ತಾಯ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಮೂಡಲಪಾಯ ಯಕ್ಷಗಾನ ಕಲೆ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಶೀಘ್ರವೇ ಮೂಡಲಪಾಯ ಯಕ್ಷಗಾನ ಅಕಾಡೆಮಿ ಸ್ಥಾಪಿಸಬೇಕು ಎಂದು ಒತ್ತಾಯಿಸಿ ರಾಜ್ಯದ ವಿವಿಧೆಡೆಯಿಂದ ಭಾಗವಹಿಸಿದ್ದ ಭಾಗವತರು, ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರು, ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷರು ಸೇರಿದಂತೆ ಹಲವರು ಒತ್ತಾಯಿಸಿದರು.

ಇಲ್ಲಿನ ಕನ್ನಡ ಭವನದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ, ಕರ್ನಾಟಕ ಜಾನಪದ ಪರಿಷತ್ತು, ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಂಡ್ಯ ಕರ್ನಾಟಕ ಸಂಘದ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ‘ಮೂಡಲಪಾಯ ಯಕ್ಷಗಾನ ಪರಂಪರೆ–ಪುನರ್ ಚೇತನ ವಿಚಾರ ಸಂಕಿರಣ ಮತ್ತು ಭಾಗವತರ ಸಮಾವೇಶ’ದಲ್ಲಿ ನೆರೆದವರು ಒಕ್ಕೊರಲ ಮನವಿ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮನವಿ ಸ್ವೀಕರಿಸಿ ಹಾಗೂ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿ, ‘ನಿಮ್ಮ ಮನವಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ಅವರಿಗೆ ತಲುಪಿಸುತ್ತೇನೆ. ಅಲ್ಲದೆ, ನಿಮ್ಮ ಪರವಾಗಿ ಅಕಾಡೆಮಿ ಸ್ಥಾಪಿಸುವಂತೆ ಶಿಫಾರಸು ಮಾಡುತ್ತೇನೆ’ ಎಂದು ಭರವಸೆ ನೀಡಿದರು.

ಸಮಾವೇಶದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಟಿ.ತಿಮ್ಮೇಗೌಡ, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ, ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್ ಗೌಡ, ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಬಾ.ಹ.ರಮಾಕುಮಾರಿ ಹಾಗೂ ರಾಜ್ಯದ ವಿವಿಧೆಡೆಯಿಂದ 150ಕ್ಕೂ ಹೆಚ್ಚು ಭಾಗವತರು ಭಾಗವಹಿಸಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು