ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಬಸ್ ನಿಲ್ದಾಣಕ್ಕೆ ಅರಸು ಹೆಸರಿಡಲು ಆಗ್ರಹ

Published 4 ಆಗಸ್ಟ್ 2023, 15:47 IST
Last Updated 4 ಆಗಸ್ಟ್ 2023, 15:47 IST
ಅಕ್ಷರ ಗಾತ್ರ

ತುಮಕೂರು: ನಗರದಲ್ಲಿ ನಿರ್ಮಾಣವಾಗುತ್ತಿರುವ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣಕ್ಕೆ ಹಿಂದುಳಿದ ವರ್ಗಗಳ ನಾಯಕರಾಗಿದ್ದ ಡಿ.ದೇವರಾಜ ಅರಸು ಹೆಸರು ನಾಮಕರಣ ಮಾಡುವಂತೆ ಹಿಂದುಳಿದ ವರ್ಗಗಳ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಡಿ.ದೇವರಾಜ ಅರಸು 108ನೇ ಜನ್ಮ ದಿನಾಚರಣೆ ಸಂಬಂಧ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಒತ್ತಾಯ ಕೇಳಿ ಬಂತು.

ಈ ಸಂಬಂಧ ಮನವಿ ನೀಡಿದರೆ ಅದನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.

ಅರಸು ಜಯಂತಿ ಅಂಗವಾಗಿ ಜಿಲ್ಲೆಯ ಎಲ್ಲಾ ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಬೇಕು. ವಿಜೇತರಿಗೆ ಬಹುಮಾನ ನೀಡಬೇಕು. ಹಿಂದುಳಿದ ವರ್ಗಕ್ಕಾಗಿ ದುಡಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ದೇವರಾಜ ಅರಸು ಪ್ರಶಸ್ತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ಇದ್ದುಕೊಂಡು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಎಂಬಿಬಿಎಸ್, ಇತರೆ ತಾಂತ್ರಿಕ ಕೋರ್ಸ್ ಪರೀಕ್ಷೆಗಳಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಬೇಕು ಎಂದು ನಿರ್ದೇಶಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಸ್.ಆರ್.ಗಂಗಪ್ಪ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT