ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು | ಕನ್ನಡಿಗರಿಗೆ ಉದ್ಯೋಗ ನೀಡಲು ಆಗ್ರಹ

Published 2 ಜುಲೈ 2024, 4:23 IST
Last Updated 2 ಜುಲೈ 2024, 4:23 IST
ಅಕ್ಷರ ಗಾತ್ರ

ತುಮಕೂರು: ರಾಜ್ಯದ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಯಿತು.

‘ರಾಜ್ಯಕ್ಕೆ ದಕ್ಷಿಣ ಹಾಗೂ ಉತ್ತರ ಭಾರತದ ಇತರ ರಾಜ್ಯಗಳಿಂದ ವಲಸೆ ಬರುತ್ತಿದ್ದಾರೆ. ವಲಸೆ ಪ್ರಮಾಣ ಪ್ರತಿ ವರ್ಷ ಹೆಚ್ಚುತ್ತಿದೆ. ಇದರಿಂದ ಕನ್ನಡಿಗರಿಗೆ ಉದ್ಯೋಗ ಸಿಗುತ್ತಿಲ್ಲ. ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು. ಖಾಸಗಿ ಸಂಸ್ಥೆಗಳಲ್ಲೂ ಕನ್ನಡಿಗರಿಗೆ ಅವಕಾಶ ಕಲ್ಪಿಸಬೇಕು. ನೌಕರಿ ನೀಡದ ಸಂಸ್ಥೆಗಳಿಗೆ ದಂಡ ವಿಧಿಸಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ರಂಗಸ್ವಾಮಿ, ಪದಾಧಿಕಾರಿಗಳಾದ ಸುನೀತಾ ಮೂರ್ತಿ, ಟಿ.ಎ.ಕಾಂತರಾಜು, ಎನ್.ಎಸ್.ವಿಷ್ಣುವರ್ಧನ್, ಮೋಹನ್‌ಕುಮಾರ್‌, ಯೋಗೀಶ್‌ಗೌಡ, ಅಬ್ಬಾಸ್‌, ಶಿವಕುಮಾರ್‌, ಕಿಶೋರ್‌ ಮುಂತಾದವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT