ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ: ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಧರಣಿ

Published 2 ಏಪ್ರಿಲ್ 2024, 13:55 IST
Last Updated 2 ಏಪ್ರಿಲ್ 2024, 13:55 IST
ಅಕ್ಷರ ಗಾತ್ರ

ಶಿರಾ: ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುವಂತೆ ಒತ್ತಾಯಿಸಿ ರೈತ ಸಂಘದಿಂದ ಮಂಗಳವಾರ ಬೆಸ್ಕಾಂ ಕಚೇರಿ ಮುಂದೆ ಧರಣಿ ನಡೆಸಿ ಬೆಸ್ಕಾಂ ಎಇಇ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ತಾಲ್ಲೂಕಿನಲ್ಲಿ ಭೀಕರ ಬರಗಾಲ ಇದ್ದು ಕುಡಿಯುವ ನೀರಿರೂ ಸಂಕಷ್ಟ ಎದುರಾಗಿದೆ. ಜಾನುವಾರು ಹಾಗೂ ಜನರಿಗೆ ಕುಡಿಯಲು ನೀರಿಲ್ಲ. ಅಡಿಕೆ ಮತ್ತು ತೆಂಗಿನ ತೋಟಗಳು ನೀರಿಲ್ಲದೆ ಒಣಗುತ್ತಿವೆ.

ನಿತ್ಯ ನೀಡುತ್ತಿರುವ ಮೂರು ಫೇಸ್ ವಿದ್ಯುತ್ ಕೂಡ ಸಮರ್ಪಕವಾಗಿ ಪೂರೈಕೆ ಮಾಡುತ್ತಿಲ್ಲ. ಈ ಬಗ್ಗೆ ರೈತರು ಪ್ರಶ್ನೆ ಮಾಡಿದರೆ ಬೆಸ್ಕಾಂ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಉತ್ತರ ನೀಡುತ್ತಿದ್ದಾರೆ. ರೈತರ ಕಷ್ಟ ಅವರಿಗೆ ತಿಳಿಯುತ್ತಿಲ್ಲ ಎಂದು ರೈತ ಸಂಘದ ಅಧ್ಯಕ್ಷ ಸಣ್ಣದ್ಯಾಮೇಗೌಡ ನೇತೃತ್ವದಲ್ಲಿ ಧರಣಿ ನಡೆಸಿ ಬೆಸ್ಕಾಂ ಎಇಇ ಗೋವಿಂದರಾಜು ಅವರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT