ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾಧೀನ; ತೋಂಟದ ಶ್ರೀ ವಿರೋಧ

Last Updated 7 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಗದಗ: ‘ಸರ್ಕಾರ ಮಠಗಳನ್ನು ಸ್ವಾಧೀನಕ್ಕೆ ಪಡೆಯಲಿದೆ ಎಂಬ ಸುದ್ದಿಯನ್ನು ಕೆಲ ಮಾಧ್ಯಮಗಳು ಪ್ರಸಾರ ಮಾಡಿವೆ. ಆದರೆ, ಇದು ಕೇವಲ ಹಿಂದೂ, ಲಿಂಗಾಯತ ಮಠಗಳಿಗ ಮಾತ್ರ ಅನ್ವಯ ಆಗುವುದಾದರೆ ಅದನ್ನು ತೀವ್ರವಾಗಿ ವಿರೋಧಿಸುತ್ತೇನೆ’ ಎಂದು ಗದುಗಿನ ತೋಂಟದಾರ್ಯ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರ ಮಠಗಳನ್ನು ಸ್ವಾಧೀನಕ್ಕೆ ಪಡೆಯುವುದಾದರೆ, ಅದು ಎಲ್ಲ ಧರ್ಮಗಳ ಧಾರ್ಮಿಕ ಕೇಂದ್ರಗಳಿಗೂ ಅನ್ವಯವಾಗುವಂತೆ ಏಕರೂಪದ ಕಾಯ್ದೆ ಜಾರಿಗೆ ತರಬೇಕು’ ಎಂದು ಅಭಿಪ್ರಾಯಪಟ್ಟರು.

‘ಮುಜರಾಯಿ ಇಲಾಖೆಗೆ ಒಳಪಟ್ಟಿರುವ ದೇವಸ್ಥಾನಗಳ ಸ್ಥಿತಿ ಏನಾಗಿದೆ ಎನ್ನುವುದು ರಾಜ್ಯದ ಜನತೆಗೆ ತಿಳಿದಿದೆ. ಮಠಗಳಿಗೆ ಈ ಸ್ಥಿತಿ ಎಂದಿಗೂ ಬರಬಾರದು. ಮಠಗಳಿಗೆ ಧಕ್ಕೆ ಉಂಟು ಮಾಡುವ ಕಾಯ್ದೆಯನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು.

‘ಮಠಗಳು ಗೌರವಯುತವಾಗಿ ಕೆಲಸ ಮಾಡುತ್ತಿವೆ. ಅವುಗಳನ್ನು ನಿಯಂತ್ರಿಸಲು ಹೊರಟರೆ, ಸರ್ಕಾರ ಜೇನುಗೂಡಿಗೆ ಕೈಹಾಕಿದಂತೆ ಆಗುತ್ತದೆ. ಇದರ ವ್ಯತಿರಿಕ್ತ ಪರಿಣಾಮಗಳನ್ನೂ ಸರ್ಕಾರ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT