ಬುಧವಾರ, ಜುಲೈ 28, 2021
21 °C

ನಾಫೆಡ್‌ಗೆ ಆಗ್ರಹಿಸಿ ಪಾದಯಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುರುವೇಕೆರೆ: ತಾಲ್ಲೂಕಿನ ತೆಂಗು ಬೆಳೆಗಾರರ ಹಿತ ಕಾಯಲು ನಾಫೆಡ್ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ತುರುವೇಕೆರೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರೈತರು ಹಾಗೂ ಜೆಡಿಎಸ್ ಕಾರ್ಯಕರ್ತರ ಜತೆ ಶೀಘ್ರ ಪಾದಯಾತ್ರೆ ನಡೆಸಲಾಗುವುದು ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿದರು.

ಕೊಬ್ಬರಿ ಬೆಲೆ ಕುಸಿದಿದೆ. ಕನಿಷ್ಠ ₹ 15 ಸಾವಿರ ಬೆಂಬಲ ಬೆಲೆ ನಿಗದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಚ್ಛಾಶಕ್ತಿ ತೋರಬೇಕು ಎಂದು ಸುದ್ದಿ ಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜೆಡಿಎಸ್ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಬಾಣಸಂದ್ರ ರಮೇಶ್ ಅವರ ಲಾರಿಗಳನ್ನು ತಡೆಯುವಂತೆ ಶಾಸಕ ಮಸಾಲ ಜಯರಾಮ್ ಅಧಿಕಾರಿಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ರಾಜಕೀಯ ದ್ವೇಷಕ್ಕಾಗಿ ವೈಯಕ್ತಿಕ ವ್ಯವಹಾರಗಳಲ್ಲಿ ಮೂಗು ತೂರಿಸುವುದು ಶಾಸಕರಿಗೆ ಶೋಭೆಯಲ್ಲ. ಇದೇ ಚಾಳಿ ಮುಂದುವರಿಸಿದರೆ ಶಾಸಕರ ಕಚೇರಿ ಮುಂದೆ ಧರಣಿ ನೆಡಸಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ತಾ.ಪಂ. ಜಿ ಅಧ್ಯಕ್ಷ ಕೊಳಾಲಗಂಗಾಧರ್, ಮುಖಂಡರಾದ ವೆಂಕಟಾಪುರ ಯೋಗೀಶ್, ವೆಂಕಟೇಶ್ ಮೂರ್ತಿ, ಅಪ್ಜಲ್, ಬಾಣಸಂದ್ರ ರಮೇಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು