ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

300ರ ಗಡಿ ತಲುಪಿದ ಡೆಂಗಿ ಸಕ್ರಿಯ ಪ್ರಕರಣ

ಈವರೆಗೆ 523 ಪ್ರಕರಣ ದೃಢ
Published : 4 ಆಗಸ್ಟ್ 2024, 16:51 IST
Last Updated : 4 ಆಗಸ್ಟ್ 2024, 16:51 IST
ಫಾಲೋ ಮಾಡಿ
Comments

ತುಮಕೂರು: ಜಿಲ್ಲೆಯಲ್ಲಿ ಡೆಂಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 300ರ ಗಡಿ ತಲುಪಿದೆ. ಡೆಂಗಿ ಹರಡುವಿಕೆ ಮತ್ತಷ್ಟು ತೀವ್ರವಾಗಿದೆ. ಈ ವರ್ಷದ ಜ.1ರಿಂದ ಆ.3ರ ವರೆಗೆ ಒಟ್ಟು 523 ಜನರಲ್ಲಿ ಡೆಂಗಿ ದೃಢಪಟ್ಟಿದೆ.

ಆ.2ರಂದು 24, 3ರಂದು 17 ಪ್ರಕರಣಗಳು ಹೊಸದಾಗಿ ದಾಖಲಾಗಿವೆ. 300 ಸಕ್ರಿಯ ಪ್ರಕರಣಗಳ ಪೈಕಿ 58 ಜನರಿಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ ಇಬ್ಬರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ ಎಲ್ಲರ ಆರೋಗ್ಯ ಸ್ಥಿರವಾಗಿದೆ.

ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳಿಂದ ಡೆಂಗಿ ತಡೆಗೆ ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ. ಎಲ್ಲ ಕಡೆ ಫಾಗಿಂಗ್‌ ಮಾಡಲಾಗುತ್ತಿದೆ. ಪ್ರತಿ ಮನೆಗೆ ಭೇಟಿ ನೀಡಿ ಲಾರ್ವಾ ಸಮೀಕ್ಷೆ ನಡೆಸಲಾಗುತ್ತಿದೆ. ಜ್ವರ, ಡೆಂಗಿ ರೋಗದ ಲಕ್ಷಣಗಳು ಕಂಡು ಬಂದರೆ ಆಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ನೀಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT