ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊರಟಗೆರೆ | ಕರ್ತವ್ಯ ಲೋಪ: ಪಿಡಿಒ ರಘುನಂದನ್ ಅಮಾನತು

Published : 24 ಸೆಪ್ಟೆಂಬರ್ 2024, 14:29 IST
Last Updated : 24 ಸೆಪ್ಟೆಂಬರ್ 2024, 14:29 IST
ಫಾಲೋ ಮಾಡಿ
Comments

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗಾ ಹೋಬಳಿ ಬೂದಗವಿ ಗ್ರಾಮ ಪಂಚಾಯಿತಿ ಪಿಡಿಒ ರಘುನಂದನ್ ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು ಅಮಾನತುಗೊಳಿಸಿ ಮಂಗಳವಾರ ಆದೇಶಿಸಿದ್ದಾರೆ.

ಪಿಡಿಒ ರಘುನಂದನ್ ಅವರು ಬೂದಗವಿ ಗ್ರಾಮ ಪಂಚಾಯಿತಿಯ ಚನ್ನರಾಯನದುರ್ಗಾ ಸರ್ಕಾರಿ ಶಾಲೆಗೆ ಸಂಬಂಧಿಸಿದ ನರೇಗಾ ಕಾಮಗಾರಿ ಅನುಷ್ಠಾನದಲ್ಲಿ ನಿಗದಿತ ಕೂಲಿ ಹಣಕ್ಕಿಂತ ಹೆಚ್ಚುವರಿಯಾಗಿ ₹50,655 ಪಾವತಿ ಮಾಡಿ ಸರ್ಕಾರದ ಅನುದಾನ ದುರುಪಯೋಗ ಪಡಿಸಿಕೊಂಡಿದ್ದಾರೆ. ಇದೇ ಶಾಲೆಯ ಶೌಚಾಲಯ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಕಾರ್ಮಿಕರಿಗೆ ನೀಡಬೇಕಿರುವ ಕೂಲಿ ಮೊತ್ತ ಪಾವತಿಸದೆ ಕರ್ತವ್ಯ ಲೋಪವೆಸಗಿದ್ದಾರೆ.

ಈ ಬಗ್ಗೆ ಕಾರಣ ಕೇಳಿ ನೋಟಿಸ್‌ ನೀಡಿದ್ದಾಗಿಯೂ ಯಾವುದೇ ಸಮಜಾಯಿಸಿ ನೀಡದ ಕಾರಣ ವಿಚಾರಣೆ ಕಾಯ್ದಿರಿಸಿ ರಘುನಂದನ್ ಅವರನ್ನು ಅಮಾನತುಗೊಳಿಸಿರುವುದಾಗಿ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT