ಬುಧವಾರ, ಸೆಪ್ಟೆಂಬರ್ 22, 2021
29 °C

2 ಎಕರೆ ನೀಲಗಿರಿ ನಾಶ; ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಣಿಗಲ್ ತಾಲ್ಲೂಕು ಕಿತ್ತಾನಾಮಂಗಲ ಸರ್ಕಾರಿ ಗೋಮಾಳದಲ್ಲಿದ್ದ ನೀಲಗಿರಿ ಮರಗಳನ್ನು ಕಡಿದಿರುವುದು

ಕುಣಿಗಲ್: ಸರ್ಕಾರಿ ಗೋಮಾಳ ಜಾಗದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಿಂದ ಬೆಳೆಸಲಾಗಿದ್ದ ಎರಡು ಎಕರೆ ನೀಲಗಿರಿ ಮರಗಳನ್ನು ನಾಶ ಮಾಡಿದ್ದ ತಾಲ್ಲೂಕು ಪಂಚಾಯಿತಿ ಸದಸ್ಯೆಯ ಪತಿಯ ವಿರುದ್ಧ ವಲಯ ಅರಣ್ಯಾಧಿಕಾರಿ ಪ್ರಕರಣ ದಾಖಲಿಸಿದ್ದಾರೆ.

ಕುಣಿಗಲ್ ತಾಲ್ಲೂಕು ಪಂಚಾಯಿತಿ ಸದಸ್ಯೆ ಷರೀಫಾಬಿ ಪತಿ ಮೊಹಮ್ಮದ್ ಸೆಮ್ಮಿವುಲ್ಲ ಅವರ ಮೇಲೆ ಪ್ರಕರಣ ದಾಖಲಾಗಿದೆ.

ಕಿತ್ತಾನಾಮಂಗಲ ಸರ್ವೇ ನಂ. 78ರ ಗೋಮಾಳದಲ್ಲಿ 1998ರಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಿಂದ ನೀಲಗಿರಿ ಸಸಿಗಳನ್ನು ಬೆಳೆಸಲಾಗಿತ್ತು. ಈ ಭಾಗದಲ್ಲಿ ಸುಮಾರು ಎರಡು ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಸುಮಾರು 200 ನೀಲಗಿರಿ ಮರಗಳನ್ನು ಮೊಹಮ್ಮದ್ ಸೆಮ್ಮಿವುಲ್ಲಾ ಜೆಸಿಬಿ ಬಳಸಿ ಕೆಡವಿ ಜಮೀನು ಸಮತಟ್ಟು ಮಾಡಿದ್ದಾರೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಪ್ರಕರಣ ದಾಖಲಿಸಿರುವುದಾಗಿ ವಲಯ ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.

ಬೆಳೆದು ನಿಂತ ಮರಗಳನ್ನು ಕಡಿದ ಬಗ್ಗೆ ಅಸಮಾಧಾನಗೊಂಡ ಗ್ರಾಮಸ್ಥರಾದ ಮೋಹನ್, ಬಾಬು ಮತ್ತು ಕೆ.ಎಚ್. ಎನ್.ಗೌಡ ಅವರು ಕಂದಾಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು