ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ನಾಳೆ ಎಚ್.ಡಿ.ದೇವೇಗೌಡ ಭೇಟಿ

Published 14 ಏಪ್ರಿಲ್ 2024, 16:01 IST
Last Updated 14 ಏಪ್ರಿಲ್ 2024, 16:01 IST
ಅಕ್ಷರ ಗಾತ್ರ

ತುಮಕೂರು: ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸೋಮವಾರ (ಏ.15) ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಮೈತ್ರಿ ಅಭ್ಯರ್ಥಿ ಸೋಮಣ್ಣ ಪರ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10.30 ಗಂಟೆಗೆ ಕೊರಟಗೆರೆಯ ಎಂ.ಜಿ.ಪ್ಯಾಲೇಸ್‍, ಮಧ್ಯಾಹ್ನ 12.30 ಗಂಟೆಗೆ ತುಮಕೂರು ತಾಲ್ಲೂಕಿನ ಊರ್ಡಿಗೆರೆಯಲ್ಲಿ ಏರ್ಪಡಿಸಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಜೆ 4 ಗಂಟೆಗೆ ನಗರದ ಕುಂಚಿಟಿಗರ ಸಮುದಾಯ ಭವನದಲ್ಲಿ ಆಯೋಜಿಸಿರುವ ಸಭೆಯಲ್ಲಿ ಭಾಗವಹಿಸಿ ಸೋಮಣ್ಣ ಪರ ಮತಯಾಚಿಸಲಿದ್ದಾರೆ. ಜೆಡಿಎಸ್‌–ಬಿಜೆಪಿ ಮುಖಂಡರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT