ಗುರುವಾರ , ಸೆಪ್ಟೆಂಬರ್ 23, 2021
20 °C

ಮಕ್ಕಳಲ್ಲಿ ಸಹಿಷ್ಣುತೆ ಬೆಳೆಸಿ: ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿಪಟೂರು: ಬ್ರಿಟೀಷರ ಕಪಿ ಮುಷ್ಟಿಯಿಂದ ಹೋರಾಟದ ಮೂಲಕ ಮುಕ್ತಿ ಪಡೆದ ರೀತಿಯಲ್ಲಿ, ಕೋವಿಡ್‌ ವಿರುದ್ಧ ಹೋರಾಡಲು ಜನರ
ಸಹಕಾರ ಅಗತ್ಯ ಎಂದು ಉಪವಿಭಾಗಾಧಿಕಾರಿ ದಿಗ್ವಿಜಯ ಬೋಡ್ಕೆ ತಿಳಿಸಿದರು.

ನಗರದ ಕಲ್ಪತರು ಕ್ರೀಡಾಂಗಣದಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

‌ಪ್ರತಿ ಭಾರತೀಯರು ಸಂವಿಧಾನದಲ್ಲಿ ತಿಳಿಸಿರುವ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಪಾಲನೆಗೆ ಆದ್ಯತೆ ನೀಡಬೇಕಿದೆ. ಕರ್ತವ್ಯಗಳೆಂದರೆ ನಾವು ರೂಪಿಸಿಕೊಂಡಿರುವ ಹಲವು ನಿಯಮಗಳು. ಅವುಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಪೋಷಕರು ತಮ್ಮ ಮಕ್ಕಳಲ್ಲಿ ಸಹಿಷ್ಣುತೆಯನ್ನು ಜಾಗೃತಗೊಳಿಸಬೇಕಿದೆ. ಮಕ್ಕಳಲ್ಲಿನ ಪ್ರತಿಭೆ ಮುಕ್ತವಾಗಿ ಅರಳಲು ಅವಕಾಶ ನೀಡಬೇಕು ಎಂದರು.

ಕೊರೊನಾ ವಾರಿಯರ್ಸ್‍ಗಳಿಗೆ ಪುಸ್ತಕ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳ ಗಾಯನ ನಡೆಯಿತು.

ನಗರಸಭೆಯ ಅಧ್ಯಕ್ಷ ಪಿ.ಜೆ.ರಾಮಮೋಹನ್, ತಹಶೀಲ್ದಾರ್ ಆರ್.ಜೆ. ಚಂದ್ರಶೇಖರ್, ಡಿವೈಎಸ್‍ಪಿ ಚಂದನ್ ಕುಮಾರ್, ನಗರಸಭೆ ಪೌರಾಯುಕ್ತ ಉಮಾಕಾಂತ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಟಿಎಚ್‍ಒ ಡಾ.ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ದಿನೇಶ್, ಸಿಡಿಪಿಒ ಪಿ.ಓಂಕಾರಪ್ಪ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು