ಶುಕ್ರವಾರ, ಆಗಸ್ಟ್ 19, 2022
25 °C

ಜಂಪೇನಹಳ್ಳಿ ಕೆರೆ ಅಭಿವೃದ್ಧಿ: ಕೊರಟಗೆರೆ ಶಾಸಕ ಡಾ. ಜಿ.ಪರಮೇಶ್ವರ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊರಟಗೆರೆ: ಪಟ್ಟಣಕ್ಕೆ ನೀರು ಒದಗಿಸುವ ಜಂಪೇನಹಳ್ಳಿ ಕೆರೆಯನ್ನು ಬೇಸಿಗೆಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಆ ಮೂಲಕ ಇನ್ನಷ್ಟು ನೀರು ಸಂಗ್ರಹಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದು ಶಾಸಕ ಡಾ. ಜಿ.ಪರಮೇಶ್ವರ ಹೇಳಿದರು.

ಜಂಪೇನಹಳ್ಳಿ ಕೆರೆಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸಿ ಮಾತನಾಡಿದರು.

ಕೆರೆಯಲ್ಲಿ ಹೂಳು ತುಂಬಿದೆ. ಬೇಸಿಗೆ ಯಲ್ಲಿ ಹೂಳು ಎತ್ತಿ, ಕೋಡಿಯನ್ನು ಇನ್ನಷ್ಟು ಎತ್ತರಿಸುವ ಕಾಮಗಾರಿಗೆ ಚಾಲನೆ ನೀಡಲಾಗುವುದು. ಗೌಡನಕೆರೆಯನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. ಅದರಿಂದ ಈ ಭಾಗದ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ತಾಲ್ಲೂಕಿನ 64 ಸಾವಿರ ಹೆಕ್ಟೇರ್ ಭೂಮಿ ಕೃಷಿ ಭೂಮಿಯಲ್ಲಿ ಈಗಾಗಲೇ ಶೇ 70ರಷ್ಟು ಬಿತ್ತನೆಯಾಗಿದೆ. ಗೊಬ್ಬರದ ಕೊರತೆಯಾಗಿದ್ದು, ಸಮರ್ಪಕ ಗೊಬ್ಬರ ಪೂರೈಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದರು.

ಎತ್ತಿನಹೊಳೆ ಯೋಜನೆಗೆ ಬೈರಗೊಂಡ್ಲು ಬಳಿ ₹ 5,000 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರ ರೈತರಿಗೆ ಸೂಕ್ತ ಪರಿಹಾರ ನೀಡಬೇಕು
ಎಂದರು. 

ಪಟ್ಟಣ ಪಂಚಾಯಿತಿ ಸದಸ್ಯರಾದ ಕೆ.ಆರ್. ಓಬಳರಾಜು, ಎ.ಡಿ. ಬಲರಾಮಯ್ಯ, ನಟರಾಜು, ನಾಗರಾಜು, ಇಒ ಲಕ್ಷ್ಮಣ್, ಮುಖಂಡರಾದ ಕೆ.ವಿ.ಮಂಜುನಾಥ್, ಚಿಕ್ಕರಂಗಯ್ಯ, ಎಲ್.ರಾಜಣ್ಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಟಿ.ಸಿ.ರಾಮಯ್ಯ, ಉಪಾಧ್ಯಕ್ಷ ವೆಂಕಟಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು