ನಕಲಿ ವೈದ್ಯರ ಹಾವಳಿ ನಿಯಂತ್ರಿಸದಿರುವುದು, ಮದ್ಯ ಸೇವಿಸಿ ಕೆಲಸಕ್ಕೆ ಹಾಜರಾಗುವ ವೈದ್ಯರ ಬಗ್ಗೆ ದೂರುಗಳು ಬಂದಿದ್ದರೂ ಕ್ರಮ ಕೈಗೊಳ್ಳದಿರುವುದು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಲಭ್ಯತೆ ಸೇರಿದಂತೆ ಅವ್ಯವಸ್ಥೆ ಸರಿಪಡಿಸದಿರುವುದು, ತಾಲ್ಲೂಕು ಆಸ್ಪತ್ರೆಗಳನ್ನು ಸುಸ್ಥಿತಿಗೆ ತರದಿರುವುದು, ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗದಿರುವುದು ಹಾಗೂ ಇತರೆ ಆರೋಪಗಳನ್ನು ಎದುರಿಸುತ್ತಿದ್ದರು.