ಗುಬ್ಬಿ: ತಾಲ್ಲೂಕಿನ ನಿಟ್ಟೂರಿನಲ್ಲಿರುವ ಡಿಜಿಟಲ್ ಗ್ರಂಥಾಲಯಕ್ಕೆ ಏಳು ತಿಂಗಳಿನಿಂದ ಬೀಗ ಹಾಕಲಾಗಿದೆ. ಗ್ರಂಥಾಲಯ ಬಾಗಿಲು ತೆರೆಯದೆ ಓದುಗರ ಉಪಯೋಗಕ್ಕೆ ಬಾರದಂತಾಗಿದೆ.

ಗ್ರಂಥಾಲಯ ನೋಡಿಕೊಳ್ಳುತ್ತಿದ್ದ ಮೇಲ್ವಿಚಾರಕರು ನಿವೃತ್ತಿಯಾದ ನಂತರ ಹೊಸದಾಗಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳದ ಕಾರಣ ಬೀಗ ಹಾಕಲಾಗಿದೆ. ಗ್ರಂಥಾಲಯವು ಅನೇಕ ತಿಂಗಳುಗಳಿಂದ ಮುಚ್ಚಿರುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರಿಗೆ, ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.

ನಿಟ್ಟೂರಿನ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿಯೇ ಡಿಜಿಟಲ್ ಗ್ರಂಥಾಲಯವಿದ್ದರೂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಮತ್ತೊಬ್ಬ ಸಿಬ್ಬಂದಿಯನ್ನು ನೇಮಿಸಿಕೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿದ್ದರೂ, ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

ತಿಂಗಳಾನುಗಟ್ಟಲೇ ಬೀಗ ಹಾಕಿರುವುದರಿಂದ ಪುಸ್ತಕಗಳು ದೂಳು ಹಿಡಿಯುತ್ತಿವೆ. ಗ್ರಂಥಾಲಯದಲ್ಲಿದ್ದ ಕಂಪ್ಯೂಟರ್ ಹಾಗೂ ಪೀಠೋಪಕರಣಗಳು ಹಾಳಾಗುವ ಹಂತ ತಲುಪುತ್ತಿವೆ ಎಂದು ಓದುಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಶಾಲೆ, ಕಾಲೇಜುಗಳಿಗೆ ರಜೆ ಇದ್ದ ಸಂದರ್ಭದಲ್ಲಿ ಮಕ್ಕಳಿಗೆ ಅನುಕೂಲವಾಗಬೇಕಾಗಿದ್ದ ಡಿಜಿಟಲ್ ಗ್ರಂಥಾಲಯಕ್ಕೆ ಬೀಗ ಹಾಕಿರುವುದರಿಂದ ಮಕ್ಕಳು ಗ್ರಂಥಾಲಯದ ಬಳಿ ಬಂದು ವಾಪಸ್ ಹೋಗುವಂತಾಗಿದೆ. ಹೀಗಾಗಿ ಮಕ್ಕಳು ಮನೆಗಳಲ್ಲಿ ಟಿವಿ, ಮೊಬೈಲ್ ನೋಡುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.