ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19 ಲಾಕ್‌ಡೌನ್ ಪರಿಹಾರವಾಗಿ ಪ್ಯಾಕೇಜ್‌ಗೆ ಅಂಗವಿಕಲರ ಆಗ್ರಹ

Last Updated 6 ಜೂನ್ 2021, 3:34 IST
ಅಕ್ಷರ ಗಾತ್ರ

ತುಮಕೂರು: ಕೋವಿಡ್–19 ಲಾಕ್‌ಡೌನ್ ಪರಿಹಾರವಾಗಿ ಎರಡು ಬಾರಿ ವಿಶೇಷ ಪ್ಯಾಕೇಜ್ ಘೋಷಿಸಿದ್ದರೂ ಅಂಗವಿಕಲರನ್ನುಕಡೆಗಣಿಸಿರುವುದಕ್ಕೆ ಜಿಲ್ಲಾ ಅಂಗವಿಕಲರ ಕಲ್ಯಾಣ ವೇದಿಕೆ ಅಧ್ಯಕ್ಷ ಸಿ.ಗಂಗರಾಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ವಿಶೇಷ ಪ್ಯಾಕೇಜ್‌ಗೆ ಆಗ್ರಹಿಸಿದ್ದಾರೆ.

ಮೊದಲ ಪ್ಯಾಕೇಜ್‌ನಲ್ಲಿ ₹1,250 ಕೋಟಿ, ಎರಡನೇ ಬಾರಿಗೆ ₹500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿ, ದುಡಿಯುವ ವರ್ಗ,ಕುಲಕಸುಬು ನಂಬಿ ಬದುಕುತ್ತಿರುವ ಸಮುದಾಯಗಳಿಗೆ ಆರ್ಥಿಕ ನೆರವು ನೀಡಲಾಗಿದೆ. ಆದರೆ ಸರ್ಕಾರದ ಸವಲತ್ತುಗಳನ್ನೇ ನಂಬಿ ಬದುಕುತ್ತಿರುವ ಅಂಗವಿಕಲರನ್ನು ಕಡೆಗಣಿಸಲಾಗಿದೆ. ದೇಶದಲ್ಲಿ ಒಟ್ಟಾರೆ ಜನಸಂಖ್ಯೆಯ ಶೇ 5ರಷ್ಟು ಇದ್ದು, ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

ಅಂಗವಿಕಲರಿಗೆ ನೀಡುತ್ತಿದ್ದ ಮಾಸಾಶನವನ್ನು ತಾಂತ್ರಿಕ ಕಾರಣವೊಡ್ಡಿ ಕೆಲವು ಜಿಲ್ಲೆಗಳಲ್ಲಿ ಒಂದು ವರ್ಷದಿಂದ ತಡೆ ಹಿಡಿಯಲಾಗಿದೆ. ಮತ್ತೆ ಕೆಲವು ಜಿಲ್ಲೆಗಳಲ್ಲಿ 2 ತಿಂಗಳಿಂದ ನೀಡಿಲ್ಲ. ಇಂತಹ ಸಂಕಷ್ಟದ ದಿನಗಳಲ್ಲಿ ನೀತಿ, ನಿಯಮಗಳ ಹೆಸರಿನಲ್ಲಿಮಾಸಾಶನಕ್ಕೆ ಕಡಿವಾಣ ಹಾಕುವ ಬದಲು, ಮಾನವೀಯ ದೃಷ್ಟಿಯಿಂದ ಕೆಲವು ನಿಯಮಗಳನ್ನು ಸಡಿಲಿಸಿ ಮಾಶಾಸನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಹೊಲಿಗೆ, ಕಿರಾಣಿ ಅಂಗಡಿ, ಕಲಾವಿದರಾಗಿ ದುಡಿಯುವ ಮೂಲಕ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ. ಕೋವಿಡ್ ಸಂಕಷ್ಟದಲ್ಲಿ ವ್ಯಾಪಾರವಿಲ್ಲದೆ ಪರಿತಪಿಸುತ್ತಿದ್ದಾರೆ ಎಂದಿದ್ದಾರೆ.

ಅಂಗವಿಕಲರ ಕಲ್ಯಾಣಕ್ಕಾಗಿ ಗ್ರಾಮೀಣ ಭಾಗದಲ್ಲಿ ದುಡಿಯುತ್ತಿರುವ ವಿಆರ್‌ಡಬ್ಲ್ಯು, ಎಂಆರ್‌ಡಬ್ಲ್ಯುಗಳ ಸ್ಥಿತಿ ಹೇಳತೀರದಾಗಿದೆ. ಎರಡು ತಿಂಗಳಿಂದ ವೇತನವಿಲ್ಲದೆ ಪರದಾಡುತ್ತಿದ್ದಾರೆ. ಸರ್ಕಾರದ ಸವಲತ್ತುಗಳನ್ನು ಆರ್ಹ ಅಂಗವಿಕಲರಿಗೆ ತಲುಪಿಸಲು ದುಡಿಯುತ್ತಿದ್ದು, ಆಕಸ್ಮಿಕವಾಗಿ ಮೃತಪಟ್ಟರೆ ಪರಿಹಾರ ನೀಡಬೇಕು. ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದು, ಅವರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT