ತುಮಕೂರು: ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕದ ನಂತರ ಜಿಲ್ಲೆಯ ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ ಭುಗಿಲೆದಿದ್ದು, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಎಸ್.ಟಿ.ಶ್ರೀನಿವಾಸ್ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ.

ನಿಗಮ–ಮಂಡಳಿಗಳ ನೇಮಕದ ಸಮಯದಲ್ಲಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರಿಗೆ ಅವಕಾಶ ಸಿಕ್ಕಿಲ್ಲ. ಸಚಿವರೂ ಕಾರ್ಯಕರ್ತರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಶ್ರೀನಿವಾಸ್, ಬುಧವಾರ ರಾಜೀನಾಮೆ ಸಲ್ಲಿಸಲಿದ್ದಾರೆ.

ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಪಕ್ಷದ ಸಂಘಟನೆಗಾಗಿ ದುಡಿದವರಿಗೆ ಅವಕಾಶ ಸಿಗುತ್ತಿಲ್ಲ. ಜಿಲ್ಲೆಯ ಸಚಿವರು ಕಾರ್ಯಕರ್ತರನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಹೊರಗಡೆಯಿಂದ ಬಂದವರಿಗೆ ಆದ್ಯತೆ ನೀಡುತ್ತಿದ್ದಾರೆ. ನಿಗಮ–ಮಂಡಳಿಗಳ ವಿಚಾರದಲ್ಲೂ ಇದು ಮುಂದುವರಿದಿದೆ ಎಂದು ಕೆಲ ಕಾಂಗ್ರೆಸ್ ಮುಖಂಡರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.