ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಗೃಹರಕ್ಷಕರಿಗೆ ದಿನಸಿ ಕಿಟ್ ವಿತರಣೆ

Last Updated 20 ಜೂನ್ 2021, 2:05 IST
ಅಕ್ಷರ ಗಾತ್ರ

ತುಮಕೂರು: ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಗೃಹರಕ್ಷಕ ದಳದ ಸಿಬ್ಬಂದಿಗೆ ಭಗತ್ ಕ್ರಾಂತಿ ಸೇನೆ ವತಿಯಿಂದದಿನಸಿ ಪದಾರ್ಥಗಳ ಕಿಟ್‌ ವಿತರಿಸಲಾಯಿತು.

ದಿನಸಿ ಕಿಟ್ ವಿತರಿಸಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ‘ಲಾಕ್‍ಡೌನ್ ಸಂದರ್ಭದಲ್ಲಿ ಜನರನ್ನು ನಿಯಂತ್ರಣ ಮಾಡುವಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಕಾರ್ಯ ಮಹತ್ತರವಾದುದು’
ಎಂದರು.

ಕೋವಿಡ್‌ ಮುಕ್ತ ಸಮಾಜ ನಿರ್ಮಾಣ ಕಾರ್ಯದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗಳು ಸೈನಿಕರಂತೆ ಕಾರ್ಯ
ನಿರ್ವಹಿಸುತ್ತಿದ್ದಾರೆ.ಅದರಲ್ಲೂ ಮಹಿಳಾ ಸಿಬ್ಬಂದಿ ಧೈರ್ಯದಿಂದ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಭಗತ್ ಕ್ರಾಂತಿಸೇನೆಯ ಆರಾಧ್ಯ ಮಂಚಲದೊರೆ, ‘ನಗರದಲ್ಲಿ ಹಲವಾರು ದಾನಿಗಳ ಸಹಕಾರದಿಂದ ದಿನಸಿ ಪದಾರ್ಥಗಳ ಕಿಟ್‍ ನೀಡಲಾಯಿತು. ಅದೇ ಮಾದರಿಯಲ್ಲಿ ವಿವಿಧ ರೀತಿಯಲ್ಲಿ ಸಂಕಷ್ಟಕ್ಕೊಳಗಾಗಿರುವ 1,700ಕ್ಕೂ ಹೆಚ್ಚು ಜನರಿಗೆ ಕಿಟ್‍ಗಳನ್ನು ವಿತರಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆಂಟ್ ಆರ್.ಪಾತಣ್ಣ, ಗೃಹರಕ್ಷಕ ದಳದ ಸಿಬ್ಬಂದಿಯನ್ನು ಗುರುತಿಸಿ ದಿನಸಿ ಪದಾರ್ಥಗಳ ಕಿಟ್‍ ವಿತರಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

ಮಹಾನಗರ ಪಾಲಿಕೆ ಮೇಯರ್ ಬಿ.ಜಿ.ಕೃಷ್ಣಪ್ಪ, ಅಗ್ನಿಶಾಮಕ ದಳದ ಅಧಿಕಾರಿ ಪಂಚಾಕ್ಷರಯ್ಯ, ಭಗತ್ ಕ್ರಾಂತಿ ಸೇನೆಯ ಚೇತನ್, ಪ್ರವೀಣ್, ರಘು, ರಾಜು, ರಾಕಿ, ನಾಗೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT