ಗುರುವಾರ , ಜೂನ್ 30, 2022
21 °C

ಶಿಕ್ಷಕರಿಗೆ ದಿನಸಿ ಕಿಟ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಕೋವಿಡ್ ಸಂಕಷ್ಟದ ಸಮಯದಲ್ಲಿ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಕರಿಗೆ ವೇತನ ಕೊಡುತ್ತಿಲ್ಲ. 15 ತಿಂಗಳಿಂದ ಅವರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು.

ನಗರದ ಸೋಮೇಶ್ವರಪುರಂನಲ್ಲಿರುವ ವಾಸವಿ ಶಾಲೆಯಲ್ಲಿ ವೈ.ಎ.ನಾರಾಯಣಸ್ವಾಮಿ ಅಭಿಮಾನಿ ಬಳಗದ ವತಿಯಿಂದ ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ದಿನಸಿ ಪದಾರ್ಥಗಳ ಕಿಟ್ ವಿತರಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಒಂದು ಸಾವಿರ ಶಿಕ್ಷಕರಿಗೆ ಆಹಾರದ ಕಿಟ್‍ ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ಸಂಕಷ್ಟದಲ್ಲಿ ಇರುವವರಿಗೆ ಸ್ಪಂದಿಸಲಾಗುತ್ತಿದೆ ಎಂದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ‘ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರು ಕೋವಿಡ್‍ ಸಮಯದಲ್ಲಿ ವೇತನವಿಲ್ಲದೆ ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಂತಹವರಿಗೆ ಸರ್ಕಾರ ನೆರವು ನೀಡಲಿದೆ’ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ, ‘ಕೆಲಸ ಮಾಡುವಂತಹ ಶಾಲೆಗಳಲ್ಲೇ ಕೆಲಸದ ಭದ್ರತೆ ಒದಗಿಸಲು ಸರ್ಕಾರ ಆದೇಶ ಹೊರಡಿಸಲಿದೆ’ ಎಂದರು.

ವೈ.ಎ.ನಾರಾಯಣಸ್ವಾಮಿ ಅಭಿಮಾನಿ ಬಳಗದ ಕೊಪ್ಪಳ್ ನಾಗರಾಜ್, ಶ್ರೀನಿವಾಸರೆಡ್ಡಿ, ರವಿಕುಮಾರ್, ಡಿಡಿಪಿಐ ನಂಜಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯ್ಕ್, ರೇವಣಸಿದ್ಧಯ್ಯ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು