ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಧುಗಿರಿ | ವಿದ್ಯಾರ್ಥಿಗಳಿಗೆ ‘ಪ್ರಜಾವಾಣಿ’ ವಿತರಣೆ

Published 6 ಡಿಸೆಂಬರ್ 2023, 14:50 IST
Last Updated 6 ಡಿಸೆಂಬರ್ 2023, 14:50 IST
ಅಕ್ಷರ ಗಾತ್ರ

ಮಧುಗಿರಿ: ತಾಲ್ಲೂಕಿನ ಕಸಬಾ ವ್ಯಾಪ್ತಿಯ ಭಕ್ತರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ‘ಪ್ರಜಾವಾಣಿ’ ಪತ್ರಿಕೆಯನ್ನು ಶಾಲೆಯ ವಿದ್ಯಾರ್ಥಿಗಳಿಗೆ ವಿತರಿಸುವ ಮೂಲಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನ ಕಾರ್ಯಕ್ರಮ ಆಚರಿಸಲಾಯಿತು.

ವಿಧ್ಯಾರ್ಥಿಗಳಿಗೆ ‘ಪ್ರಜಾವಾಣಿ’ ವಿತರಿಸಿ ಮಾತನಾಡಿದ ತಾಲ್ಲೂಕು ಕಸಾಪ ಅಧ್ಯಕ್ಷೆ ಸಹನಾ ನಾಗೇಶ್, ವಿದ್ಯಾರ್ಥಿಗಳು ಪ್ರತಿನಿತ್ಯ ‘ಪ್ರಜಾವಾಣಿ’ ಓದುವ ಮೂಲಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮಾಡಿದ ಸಾಧನೆಯನ್ನು ನೀವು ಮಾಡಬೇಕು. ದೇಶಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ತಿಳಿಸಿದರು. ಪತ್ರಿಕೆ ಓದುವ ಅಭ್ಯಾಸ ಮಾಡಿಕೊಂಡರೆ ಸಾಕಷ್ಟು ಜ್ಞಾನ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಹಳೆಯ ವಿದ್ಯಾರ್ಥಿ ಡಾ.ನರೇಂದ್ರಬಾಬು ಮಾತನಾಡಿ, ‘ನಾನು ವಿದ್ಯಾರ್ಥಿ ದಿಸೆಯಿಂದಲೂ ‘ಪ್ರಜಾವಾಣಿ’ ಓದುತ್ತಾ ಬಂದಿರುವುದರಿಂದ ನನ್ನ ಜ್ಞಾನ ವಿಕಾಸಕ್ಕೆ ಸಾಕಷ್ಟು ಸಹಕಾರಿಯಾಗಿದೆ. ಮಕ್ಕಳು ಮಾತೃ ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡುವ ಮೂಲಕ ಉತ್ತಮ ಸಾಧನೆ ಮಾಡಬಹುದಾಗಿದೆ. ನಾನು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ವೈದ್ಯನಾಗಿದ್ದೇನೆ’ ಎಂದು ತಿಳಿಸಿದರು.

ಶಿಕ್ಷಕ ರಾಮಚಂದ್ರಪ್ಪ ಜನಪದ ಗೀತೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಹಾಡುಗಳನ್ನು ಹಾಡಿದರು.

ಮುಖ್ಯಶಿಕ್ಷಕಿ ದೇವರಾಜಮ್ಮ, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟಕೃಷ್ಣಾ ರೆಡ್ಡಿ, ಎಸ್‌ಡಿಎಂಸಿ ಅಧ್ಯಕ್ಷ ರಂಗನಾಥ, ಮುಖ್ಯ ಶಿಕ್ಷಕರಾದ ವರಲಕ್ಷ್ಮಮ್ಮ, ಗಂಗಾಧರ, ಶಿಕ್ಷಕರಾದ ಲಕ್ಷ್ಮೀನಾರಾಯಣ, ಸೋಮಶೇಖರ್, ಛಾಯಾದೇವಿ, ಭಾಗ್ಯಲತಾ, ಬಿಂದುಶ್ರೀ, ತಿಪ್ಪೇಸ್ವಾಮಿ, ರಘು ಗಂಕಾರನಹಳ್ಳಿ, ಕಸಾಪ ಹೋಬಳಿ ಅಧ್ಯಕ್ಷ ನಾಗರಾಜು, ತಾಲ್ಲೂಕು ಕಸಾಪ ಪದಾಧಿಕಾರಿಗಳಾದ ನಂಜಮ್ಮ, ಗಾಯಿತ್ರಿ, ವೀಣಾ ಭಾಗವಹಿಸಿದ್ದರು.

ರಾಧಿಕ
ರಾಧಿಕ
ನಿತ್ಯ ತಪ್ಪದೆ ‘ಪ್ರಜಾವಾಣಿ’ಯನ್ನು ಶಾಲೆಯಲ್ಲಿ ಪ್ರಾರ್ಥನಾ ಸಮಯದಲ್ಲಿ ಓದಿಸುತ್ತಾರೆ. ಬಿಡುವಿನ ವೇಳೆಯಲ್ಲಿ ಪತ್ರಿಕೆಯ ಲೇಖನಗಳ ಸಂಗ್ರಹ ಮಾಡುತ್ತೇವೆ. ತಪ್ಪದೆ ಪದಬಂಧ ಭರ್ತಿ ಮಾಡುತ್ತೇವೆ.
ರಾಧಿಕ 7ನೇ ತರಗತಿ ವಿದ್ಯಾರ್ಥಿನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT