ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿನ್ನೇನಹಳ್ಳಿಗೆ ಜಿಲ್ಲಾಧಿಕಾರಿ ಭೇಟಿ

Published 14 ಜೂನ್ 2024, 6:48 IST
Last Updated 14 ಜೂನ್ 2024, 6:48 IST
ಅಕ್ಷರ ಗಾತ್ರ

ಮಧುಗಿರಿ: ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ, ಭೇದಿಯಾಗಿ ಜನರು ತಾಲ್ಲೂಕು ಆಸ್ಪತ್ರೆಗೆ ತೆರಳಿದರೆ, ಅಲ್ಲಿನ ವೈದ್ಯರು ತುಮಕೂರು ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎದುರು ದೂರಿದರು.

ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮಕ್ಕೆ ಗುರುವಾರ ಜಿಲ್ಲಾಧಿಕಾರಿ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಅಳಲು ತೋಡಿಕೊಂಡರು.

ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಚಿಕಿತ್ಸೆ ಕೊಡಿಸಲಾಗುವುದು ಮತ್ತು ಇದರ ಜವಾಬ್ದಾರಿಯನ್ನು ಉಪವಿಭಾಗಾಧಿಕಾರಿ ಗೋಟೋರು ಶಿವಪ್ಪ ಅವರು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಚಿನ್ನೇನಹಳ್ಳಿ ಗ್ರಾಮದವರು ವಾಂತಿ, ಭೇದಿಯಾಗಿ ಅಸ್ವಸ್ಥರಾದರೆ ತುಮಕೂರಿನ ಸಿದ್ಧಾರ್ಥ, ಶ್ರೀದೇವಿ ಹಾಗೂ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದರು.

ಪಂಚಾಯಿತಿಯಿಂದ ಗ್ರಾಮದಲ್ಲಿ ಚರಂಡಿ ಮತ್ತು ರಸ್ತೆಗಳನ್ನು ಸ್ವಚ್ಛಗೊಳಿಸಬೇಕು. ಜನರು ಗುಂಪು ಸೇರದಂತೆ ಎಚ್ಚರ ವಹಿಸಬೇಕು. ಬಿಸಿ ನೀರು ಸೇವಿಸಬೇಕು. ಜನರ ಆರೋಗ್ಯ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಗೆ ಸೂಚಿಸಿದರು.

ಜಿ.ಪಂ. ಸಿಇಒ ಜಿ.ಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿ.ಪಂ.ಮಾಜಿ ಅಧ್ಯಕ್ಷೆ ಶಾಂತಲಾ ರಾಜಣ್ಣ, ಆರೋಗ್ಯ ಇಲಾಖೆ ನಿರ್ದೇಶಕ ಶ್ರೀನಿವಾಸ್, ಡಿಎಚ್‌ಒ ಮಂಜುನಾಥ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ರಾಮೇಗೌಡ, ಉಪವಿಭಾಗಾಧಿಕಾರಿ ಗೋಟೋರು ಶಿವಪ್ಪ, ತಹಶೀಲ್ದಾರ್ ಸಿಗ್ಮತ್ ಉಲ್ಲಾ, ಇಒ ಲಕ್ಷ್ಮಣ್, ಜಿ.ಪಂ.ಎಇಇ ಲೋಕೇಶ್ವರ್‌, ಟಿಎಚ್‌ಒ ಶ್ರೀನಿವಾಸ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT