ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು | ನ.18ಕ್ಕೆ ಜಿಲ್ಲಾ ಮಟ್ಟದ ಯುವಜನೋತ್ಸವ

Published : 9 ನವೆಂಬರ್ 2023, 4:43 IST
Last Updated : 9 ನವೆಂಬರ್ 2023, 4:43 IST
ಫಾಲೋ ಮಾಡಿ
Comments

ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನ. 18ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಯನ್ನು ಏರ್ಪಡಿಸಿದೆ.

ಯುವಜನೋತ್ಸವದಲ್ಲಿ 15ರಿಂದ 29 ವರ್ಷದ ಒಳಗಿರುವ ವಿವಿಧ ಸಂಘ ಸಂಸ್ಥೆಗಳ ಯುವಕ, ಯುವತಿಯರು ಹಾಗೂ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ. ಯುವಕ, ಯುವತಿಯರಿಗೆ ಪ್ರತ್ಯೇಕ ಸ್ಪರ್ಧೆ ಇರುವುದಿಲ್ಲ.

ಸ್ಪರ್ಧೆಗಳು: ಜನಪದ ನೃತ್ಯ, ಜನಪದ ಗೀತೆ (ತಂಡ), ಜನಪದ ನೃತ್ಯ, ಜನಪದ ಗೀತೆ, ಕಥೆ ಬರೆಯುವುದು (ವೈಯಕ್ತಿಕ), ಸ್ಟೋರಿ ಬರವಣಿಗೆ, ಪೋಸ್ಟರ್ ತಯಾರಿಕೆ (ಬಿತ್ತಿ ಪತ್ರ), ಛಾಯಾಚಿತ್ರ ಸೇರಿದಂತೆ ಇತರೆ ಸ್ಪರ್ಧೆಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದಾಗಿದೆ.

ನ. 17ರಂದು ಬೆಳಿಗ್ಗೆ 10.30ರಿಂದ ಸಂಜೆ 5.30 ಗಂಟೆ ಒಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಮಕೂರು– ಇಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ 9741691379 ಸಂಪರ್ಕಿಸಬಹುದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT