ಸಂತೇಬಾಚಹಳ್ಳಿ: ದೊಡ್ಡಸೋಮನಹಳ್ಳಿಯಲ್ಲಿ ಮದ್ಯ ಅಕ್ರಮ ಮಾರಾಟ ಆರೋಪ ಪ್ರಯುಕ್ತ ಅಬಕಾರಿ ಪೊಲೀಸರು ತಪಾಸಣೆ ನಡೆಸಿದರು.

ಗ್ರಾಮದಲ್ಲಿ ಪೆಟ್ಟಿ ಅಂಗಡಿಗಳಲ್ಲಿ ಮದ್ಯ ಮಾರಾಟವಾಗುತ್ತಿದೆ ಎಂದು ರೈತ ಸಂಘದ ಮುಖಂಡ ನಾಗೇಶ್ ಅಬಕಾರಿ ಅಧಿಕಾರಿಗಳಿಗೆ ದೂರವಾಣಿಯಲ್ಲಿ ದೂರು ನೀಡಿದ್ದರು. ಅಬಕಾರಿ ಅಧಿಕಾರಿಗಳು ಸ್ಥಳಕ್ಕೆ ಬಂದು ಎಲ್ಲ ಅಂಗಡಿಗಳನ್ನು ತಪಾಸಣೆ ನಡೆಸಿದರು. ಮಧ್ಯ ಸಿಗದೆ ವಾಪಸ್ ತೆರಳಿದರು.

ಅಬಕಾರಿ ಇನ್ಸ್ಪೆಕ್ಟರ್ ದೀಪಕ್ ಕುಮಾರ್ ಮಾತನಾಡಿ, ಮದ್ಯ ಅನಧಿಕೃತವಾಗಿ ಮಾರಾಟ ಮಾಡುವುದು ಅಪರಾಧವಾಗಿದೆ. ಮಾರಾಟ ಮಾಡಿದರೆ ಪ್ರಕರಣ ದಾಖಲಿಸುತ್ತೇವೆ. ಗ್ರಾಮಸ್ಥರು ಅಕ್ರಮ ಕಂಡರೆ ನಮಗೆ ಮಾಹಿತಿ ನೀಡಬೇಕು. ನಾವು ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಅಬಕಾರಿ ಸಬ್ ಇನ್ಸ್ಪೆಕ್ಟರ್ ರವಿಕುಮಾರ್, ಕಾಡಯ್ಯ, ಮುಖಂಡ ನಾಗೇಶ್ ಹಾಗೂ ಸಿಬ್ಬಂದಿ , ಗ್ರಾಮದ ಮಹಿಳೆಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-40-707439317

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.