ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: 5 ಜನರ ಮೇಲೆ ಹುಚ್ಚು ನಾಯಿ ದಾಳಿ

Published 20 ಜೂನ್ 2024, 6:25 IST
Last Updated 20 ಜೂನ್ 2024, 6:25 IST
ಅಕ್ಷರ ಗಾತ್ರ

ತುಮಕೂರು: ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಿದ್ದು, ನಗರದ ಗೋಕುಲ ಬಡಾವಣೆಯಲ್ಲಿ ಮಂಗಳವಾರ ಸಂಜೆ ಬಾಲಕಿ ಸೇರಿ ಐವರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದೆ.

ಮನೆ ಮುಂದೆ ಆಟವಾಡುತ್ತಿದ್ದ 9 ವರ್ಷದ ಬಾಲಕಿಯ ಕೈ, ಕಾಲಿಗೆ ಕಚ್ಚಿದೆ. ಸಾಕು ನಾಯಿಗಳ ಮೇಲೂ ಎರಗಿದೆ. ನಾಯಿ ಕಚ್ಚಿದ್ದರಿಂದ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ‘ಹೊರಗಡೆಯಿಂದ ನಾಯಿಗಳನ್ನು ತಂದು ರಿಂಗ್‌ ರಸ್ತೆಯಲ್ಲಿ ಬಿಟ್ಟು ಹೋಗುತ್ತಿದ್ದಾರೆ. ಇದರಿಂದ ಸಮಸ್ಯೆಯಾಗುತ್ತಿದೆ. ಇದನ್ನು ತಡೆಯುವ ಕೆಲಸ ಮಾಡಬೇಕು. ಮುಂದೆ ಇಂತಹ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು’ ಎಂದು ಗೋಕುಲ ಬಡಾವಣೆ ನಿವಾಸಿಗಳು ಒತ್ತಾಯಿಸಿದರು.

ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಬುಧವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಗೊಂಡಿದ್ದ ಬಾಲಕಿಯ ಆರೋಗ್ಯ ವಿಚಾರಿಸಿದರು. ಸ್ಥಳೀಯರಿಂದ ಅಗತ್ಯ ಮಾಹಿತಿ ಪಡೆದರು. ಪಾಲಿಕೆ ಆರೋಗ್ಯಾಧಿಕಾರಿ ವೀರಯ್ಯ ಕಲ್ಮಠ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT