ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿ

7

ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿ

Published:
Updated:
Prajavani

ತುಮಕೂರು: ದೇಶದಲ್ಲಿ ರೋಗಿಗಳಿಗೆ ರಕ್ತದ ಅವಶ್ಯಕತೆ ಹೆಚ್ಚುತ್ತಿದೆ. ಆರೋಗ್ಯವಂತ ಯುವಜನರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ತಿಳಿಸಿದರು.

ತುಮಕೂರು ವಿವಿಯಲ್ಲಿ ವಿವಿಯ ಕಲಾ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ಎನ್ಎಸ್ಎಸ್, ಎನ್‌ಸಿಸಿ ಘಟಕ, ಬೆಂಗಳೂರಿನ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಮತ್ತು ಜಯನಗರ, ಬೆಂಗಳೂರಿನ ಲಯನ್ಸ್ ಕ್ಲಬ್‌ಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ರಕ್ತದಾನದ ಮೂಲಕ ಅದರ ಪ್ರಯೋಜನ ಮತ್ತು ಮಹತ್ವವನ್ನು ಪ್ರತಿಯೊಬ್ಬರು ಅರಿಯಬೇಕಾಗಿದೆ. ಯಾವುದೇ ಭಯ, ಆಂತಕಗಳಿಲ್ಲದೆ, ನಿರ್ಭಯವಾಗಿ ರಕ್ತದಾನ ಮಾಡಬೇಕು ಎಂದು ಹೇಳಿದರು.

163 ಯೂನಿಟ್‌ ರಕ್ತ ಸಂಗ್ರಹ: ರಕ್ತದಾನ ಶಿಬಿರದಲ್ಲಿ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ವಿವಿಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ರಕ್ತದಾನ ಮಾಡಿದರು. 163 ಯೂನಿಟ್‌ಗಳಷ್ಟು ರಕ್ತವನ್ನು ಸಂಗ್ರಹಿಸಲಾಯಿತು.

ಜಿಲ್ಲಾ ರೆಡ್‌ಕ್ರಾಸ್ ಘಟಕದ ಅಧ್ಯಕ್ಷ ಎಸ್.ನಾಗಣ್ಣ, ವಿವಿಯ ಕಲಾ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರಪ್ಪ, ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಂಯೋಜನಾಧಿಕಾರಿ ಡಾ.ರಮೇಶ್ ಸಾಲಿಯಾನ್ ವಿವಿಯ ರೆಡ್‌ಕ್ರಾಸ್ ಘಟಕದ ನೋಡೆಲ್ ಅಧಿಕಾರಿ ಡಾ.ಕೆ.ಜಿ.ಪರಶುರಾಮ, ಬೆಂಗಳೂರಿನ ರೆಡ್‌ಕ್ರಾಸ್ ಸೊಸೈಟಿಯ ಡಾ.ಲೋಕೇಶ್ ಬಾಬು, ಸತೀಶ್ ಹಾಗೂ ಸುಮಂತ್ ಇದ್ದರು.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !