ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಾಹಿತಿ ನೀಡಲು ಹಿಂಜರಿಕೆ ಬೇಡ’

Last Updated 29 ಜುಲೈ 2021, 16:14 IST
ಅಕ್ಷರ ಗಾತ್ರ

ತುಮಕೂರು: ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಹಿಂಜರಿಕೆ ಅನಗತ್ಯ ಎಂದು ತುಮಕೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಅಭಿಪ್ರಾಯಪಟ್ಟರು.

ತುಮಕೂರು ವಿ.ವಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸಿದ ತಂತ್ರಾಂಶದ ಕುರಿತು ಆನ್‌ಲೈನ್ ಮೂಲಕ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪ್ರಜಾಪ್ರಭುತ್ವದ ಆದರ್ಶ ಕಾಪಾಡಿ
ಕೊಳ್ಳುವ ನಿಟ್ಟಿನಲ್ಲಿ ಮಾಹಿತಿ ಹಕ್ಕು ಕಾಯ್ದೆ ಜಾರಿಮಾಡಿದ್ದು, ಮಾಹಿತಿ ಹಕ್ಕಿನಡಿ ಕೇಳಿದ ಮಾಹಿತಿಗೆ ಸಕಾಲದಲ್ಲಿ ಉತ್ತರ ನೀಡುವುದು ಸಾರ್ವಜನಿಕ ಪ್ರಾಧಿಕಾರದ ಧರ್ಮವಾಗಿದೆ. ಆಡಳಿತ
ದಲ್ಲಿ ಪಾರದರ್ಶಕತೆ ಇದ್ದರೆ ಯಾವುದೇ ರೀತಿಯ ಮಾಹಿತಿಯನ್ನು ಸಕಾಲದಲ್ಲಿ ನೀಡಬಹುದಾಗಿದೆ ಎಂದರು.

ವಿ.ವಿ ಕುಲಸಚಿವ ಪ್ರೊ.ಕೆ.ಶಿವಚಿತ್ತಪ್ಪ, ‘ಸಾರ್ವಜನಿಕವಾಗಿ ಜವಾಬ್ದಾರಿ ಸ್ಥಾನದಲ್ಲಿ ಇರುವ ಪ್ರತಿಯೊಬ್ಬರೂ ಮಾಹಿತಿ ಹಕ್ಕಿನ ಬಗ್ಗೆ ಜ್ಞಾನ ಹೊಂದಿರಬೇಕು. ಮಾಹಿತಿ ಮತ್ತು ತಂತ್ರಜ್ಞಾನ ಬಳಕೆಯಲ್ಲಿ ವಿ.ವಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಆನ್‌ಲೈನ್ ಮಾಹಿತಿ ಹಕ್ಕಿನ ಕುರಿತು ಕಾರ್ಯಾಗಾರ ಏರ್ಪಡಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ’ ಎಂದು ಹೇಳಿದರು.

ವಿ.ವಿ ಮಾಹಿತಿ ಹಕ್ಕಿನ ನೋಡಲ್ ಅಧಿಕಾರಿ ಡಾ.ರಮೇಶ್ ಸಾಲಿಯಾನ್ ಕಾರ್ಯಾಗಾರ ನಡೆಸಿಕೊಟ್ಟರು. ವಿ.ವಿ ಎಲ್ಲಾ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT