ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿಗೆ ಡಬಲ್‌ ಎಂಜಿನ್‌ ಸಹಕಾರಿ

ಬಿಜೆಪಿ ಮುಖಂಡ ನೆ.ಲ. ನರೇಂದ್ರಬಾಬು ಅಭಿಮತ
Last Updated 14 ಮಾರ್ಚ್ 2023, 6:20 IST
ಅಕ್ಷರ ಗಾತ್ರ

ಶಿರಾ: ‘ಡಬಲ್ ಎಂಜಿನ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯ. ಆದ್ದರಿಂದ ರಾಜ್ಯದಲ್ಲಿ ಮತ್ತೆ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು’ ಎಂದು ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚಾ ಅಧ್ಯಕ್ಷ ನೆ.ಲ. ನರೇಂದ್ರಬಾಬು ಮನವಿ ಮಾಡಿದರು.

ತಾಲ್ಲೂಕಿನ ಮದಲೂರು ಗ್ರಾಮದಲ್ಲಿ ಸೋಮವಾರ ಬಿಜೆಪಿಯಿಂದ ಹಮ್ಮಿಕೊಂಡಿದ್ದ ರೈತ ಮತ್ತು ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಅಭಿವೃದ್ಧಿ ಬಿಜೆಪಿದಿಂದ ಮಾತ್ರ ಸಾಧ್ಯ. ಶಿರಾ ಉಪ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಮದಲೂರು ಕೆರೆ ತುಂಬಿಸಲಾಗಿದೆ. ಬಿಜೆಪಿಯಿಂದ ಅಭಿವೃದ್ಧಿ ಸಾಧ್ಯ ಎನ್ನುವುದಕ್ಕೆ ಕೆರೆಯಲ್ಲಿ ನಿಂತಿರುವ ನೀರೇ ಸಾಕ್ಷಿ. ರಾಜೇಶ್ ಗೌಡ ಅವರನ್ನು ಮತ್ತೆ ಶಾಸಕರಾಗಿ ಆಯ್ಕೆ ಮಾಡುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

ಶಾಸಕ ಡಾ.ಸಿ.ಎ‌ಂ. ರಾಜೇಶ್ ಗೌಡ ಮಾತನಾಡಿ, ಉಪ ಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಕೊಟ್ಟ ಮಾತಿನಂತೆ ಮದಲೂರು ಕೆರೆ ತುಂಬಿಸಿದ್ದಾರೆ. ಜೊತೆಗೆ, ಭದ್ರಾ ಮೇಲ್ದಂಡೆ ಯೋಜನೆಯಡಿ ₹1,150 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಕಾಮಗಾರಿ ತೀವ್ರಗತಿಯಲ್ಲಿ ನಡೆಯುತ್ತಿದೆ. ಬಹುತೇಕ ಕಡೆಯಲ್ಲಿ ಪೈಪ್‌ಲೈನ್ ಕಾಮಗಾರಿ ಮುಕ್ತಾಯವಾಗಿದೆ. ಶೀಘ್ರದಲ್ಲಿಯೇ ಭದ್ರಾ ನೀರು ಹರಿಯಲಿದೆ ಎಂದು
ತಿಳಿಸಿದರು.

ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದ ಸಮಯದಲ್ಲಿ ಏಕ ಚಕ್ರಾಧಿಪತ್ಯದ ಆಳ್ವಿಕೆ ಇತ್ತು. ನಮ್ಮ ಅಧಿಕಾರಾವಧಿಯಲ್ಲಿ ಬಿ.ಕೆ. ಮಂಜುನಾಥ್ ಅವರಿಗೆ ನಾರು ಅಭಿವೃದ್ಧಿ ಮಂಡಳಿ, ಎಸ್.ಆರ್. ಗೌಡ ಅವರಿಗೆ ರೇಷ್ಮೆ ಉದ್ಯಮ ಅಭಿವೃದ್ಧಿ ನಿಗಮ ಹಾಗೂ ಚಂಗಾವರ ಮಾರಣ್ಣ ಅವರಿಗೆ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಅಧಿಕಾರ ಹಂಚಿಕೆ ಮಾಡಿ ಸಾಮಾಜಿಕ ನ್ಯಾಯ ಪಾಲಿಸಲಾಗಿದೆ ಎಂದು
ತಿಳಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಕೆ. ಮಂಜುನಾಥ್ ಮಾತನಾಡಿ, ಶಿರಾ ಕ್ಷೇತ್ರದ ಜೊತೆಗೆ ಮಧುಗಿರಿ, ಪಾವಗಡ ಮತ್ತು ಕೊರಟಗೆರೆಯಲ್ಲಿ ಬಿಜೆಪಿ ಶಾಸಕರನ್ನು ಆಯ್ಕೆ ಮಾಡಬೇಕು ಎಂದು ಕೋರಿದರು.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ವೀರಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್. ಹುಲಿನಾಯ್ಕರ್, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಮಂಜುಳಾ, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಜಿಲ್ಲಾ ಅಧ್ಯಕ್ಷ ವಿಶ್ವನಾಥ್, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಲತಾ ಪ್ರದೀಪ್, ರವಿ ಪಾವಗಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT