ಶನಿವಾರ, ಫೆಬ್ರವರಿ 27, 2021
30 °C

ಖಾತೆ ಬದಲಾವಣೆಯಿಂದ ಮಾಧುಸ್ವಾಮಿ ಅಸಮಾಧಾನ; ಸಿಎಂ ಕಾರ್ಯಕ್ರಮಕ್ಕೆ ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಿದ್ದಾರೆ. ಆದರೆ ಖಾತೆ ಹಂಚಿಕೆಯಲ್ಲಿ ಅಸಮಾಧಾನಗೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮಠದ ಪರಮ ಭಕ್ತ ಜೆ.ಸಿ.ಮಾಧುಸ್ವಾಮಿ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. 

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ನೇರವಾಗಿ ವೇದಿಕೆಗೆ ಬಂದರು.

ಆದರೆ ಕಾರ್ಯಕ್ರಮಕ್ಕೆ ಜೆ.ಸಿ. ಮಾಧುಸ್ವಾಮಿ ಗೈರಾಗಿದ್ದಾರೆ. ಸಚಿವರಿಗೆ ಅಧಿಕೃತ ಆಹ್ವಾನ ಇರಲಿಲ್ಲ. ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳಲ್ಲಿ ಅವರ ಹೆಸರು ಇಲ್ಲ ಎಂಬುದು ತಿಳಿದು ಬಂದಿದೆ. 

ಇದನ್ನೂ ಓದಿ: 

ಮಾಧುಸ್ವಾಮಿ ಮಠದ ಪರಮಭಕ್ತರಾಗಿದ್ದು, ಮಠದ ಪ್ರತಿ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿ ಇರುತ್ತಿದ್ದರು. ಶಿವಕುಮಾರ ಸ್ವಾಮೀಜಿ ಅವರ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದರು.

ಖಾತೆ ಬದಲಾವಣೆಯಿಂದ ಮಾಧುಸ್ವಾಮಿ ಅಸಮಾಧಾನಗೊಂಡಿದ್ದಾರೆ. ಈ ಕಾರಣದಿಂದ ಬಂದಿಲ್ಲ ಎನ್ನುವ ಸುದ್ದಿ ಹಬ್ಬಿದೆ. ಸಣ್ಣ ನೀರಾವರಿ ವಿಚಾರವಾಗಿ ಚಿಕ್ಕನಾಯಕನಹಳ್ಳಿ, ತಿಪಟೂರು ಸೇರಿದಂತೆ ಜಿಲ್ಲೆಯಲ್ಲಿ ಮಾಧುಸ್ವಾಮಿ ಹೆಚ್ಚಿನ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ವೇದಿಕೆಯಲ್ಲಿ ಸಿದ್ಧಲಿಂಗ ಸ್ವಾಮೀಜಿ, ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ, ಉಪಮುಖ್ಯಮಂತ್ರಿ ಸಿ.ಎನ್ ಅಶ್ವತ್ಥನಾರಾಯಣ , ಕೇಂದ್ರ ಸಚಿವ ಪ್ರತಾಪ ಚಂದ್ರ ಸಾರಂಗಿ, ಸಂಸದ ಜಿ.ಎಸ್.ಬಸವರಾಜು, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್.ಪರಮಶಿವಯ್ಯ ಉಪಸ್ಥಿತರಿದ್ದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು