ಕೊರಟಗೆರೆ: ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚಿಸಿದ್ದು, ತುರ್ತು ಕ್ರಮ ಕೈಗೊಂಡು ಗ್ರಾಮೀಣ ಭಾಗದ ಜನರಿಗೆ ಶೀಘ್ರ ಶುದ್ಧ ನೀರು ಒದಗಿಸಿ ಜಿಪಿಎಸ್ ಆಧಾರಿತ ಫೋಟೊ ಹಾಗೂ ದಾಖಲೆ ಕಳಿಸುವಂತೆ ಆದೇಶಿಸಿದೆ.

ಗ್ರಾಮೀಣ ಭಾಗಗಳಲ್ಲಿ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆ ವರ್ಷಗಳಲ್ಲೇ ಮುಗ್ಗರಿಸಿದೆ. ಶುದ್ಧೀಕರಣ ಘಟಕಗಳು ಸರಿಯಾಗಿ ಕೆಲಸ ನಿರ್ವಹಿಸದ ಕಾರಣ ಜನರಿಗೆ ಕುಡಿಯುವ ನೀರು ಸಿಗುತ್ತಿಲ್ಲ ಎಂದು ‘ಪ್ರಜಾವಾಣಿ’ಯಲ್ಲಿ ನವೆಂಬರ್ 10ರಂದು ‘ಗ್ರಾಮೀಣರಿಗೆ ಸಿಗದ ಶುದ್ಧ ಕುಡಿಯುವ ನೀರು’ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು.

ಮುಖ್ಯಮಂತ್ರಿ ವಿಶೇಷ ಕರ್ತಾವ್ಯಾಧಿಕಾರಿ ಕೆ.ವೈಷ್ಣವಿ ಅವರು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಕಾರ್ಯದರ್ಶಿಗೆ ಕೂಡಲೇ ಅಗತ್ಯ ಕ್ರಮ ಕೈಗೊಂಡು ಜಿಪಿಎಸ್ ಛಾಯಾಚಿತ್ರಗಳೊಂದಿಗೆ ಅನುಪಾಲನಾ ವರದಿಯನ್ನು ಕಚೇರಿಗೆ ಸಲ್ಲಿಸುವಂತೆ ಆದೇಶಿಸಿದ್ದಾರೆ.

ಗೃಹ ಸಚಿವ ಜಿ.ಪರಮೇಶ್ವರ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರಿಗೆ ಅನುದಾನ ಬಿಡುಗಡೆಗೆ ಸೂಚಿಸಿದ್ದಾರೆ. ನೀರಿನ ಘಟಕಗಳ ದುರಸ್ತಿ ಕಾರ್ಯಾಚರಣೆ ಮತ್ತು ನಿರ್ಹವಣೆ ವೆಚ್ಚ ಸೇರಿದಂತೆ ಪರಿಷ್ಕೃತ ಕ್ರಿಯಾ ಯೋಜನೆ ಅಂದಾಜು ಪಟ್ಟಿಯನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧೀಕ್ಷಕರಿಗೆ ಸಲ್ಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.