ಬುಧವಾರ, ಮಾರ್ಚ್ 22, 2023
22 °C

ಕೃಷಿ ಅಭಿಯಾನಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಣಿಗಲ್: ಕೃಷಿ ಇಲಾಖೆಯ ಸೌಲಭ್ಯಗಳ ಮಾಹಿತಿ ಎಲ್ಲ ಕೃಷಿಕರಿಗೂ ತಲುಪಿಸಿ, ನಂತರ ಅಗತ್ಯ ದಾಖಲೆಗಳನ್ನು ಸಕಾಲದಲ್ಲಿ ಪಡೆದು ಸೌಲಭ್ಯ ವಿತರಣೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಶಾಸಕ ಡಾ.ರಂಗನಾಥ್ ಹೇಳಿದರು.

ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮುಂದೆ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೃಷಿಕರಿಗೆ ಸರ್ಕಾರಿ ಸೌಲಭ್ಯಗಳು ಅನೇಕ ಇಲಾಖೆಗಳಿಂದ ನೀಡಲಾಗುತ್ತಿದ್ದು, ಅಧಿಕಾರಿಗಳು ಸಮನ್ವಯತೆ ಸಾಧಿಸಿ ಸರ್ಕಾರಿ ಸೌಲಭ್ಯಗಳನ್ನು ವಿತರಿಸ ಬೇಕಾಗಿದೆ. ಸೌಲಭ್ಯಗಳು ಉಳ್ಳವರಿಗೆ ದೊರೆಯುತ್ತಿದೆ. ಅರ್ಹ ಬಡ ಫಲಾನುಭವಿಗಳಿಗೂ ದೊರೆಯುವ ವ್ಯವಸ್ಥೆಯಾಗಬೇಕಿದೆ ಎಂದರು.

ಕೃಷಿ ಅಭಿಯಾನದ ಮೂಲಕ ತಾಲ್ಲೂಕಿನ ಪ್ರತಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡು ರೈತರ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಂತ್ರಿಕತೆ, ವೈಜ್ಞಾನಿಕ ಪದ್ಧತಿಗಳ ಬಗ್ಗೆಯೂ ಮಾಹಿತಿ ನೀಡಬೇಕಿದೆ. ರಸಗೊಬ್ಬರ ವ್ಯಾಪಾರಿಗಳಿಂದ ಅನ್ಯಾಯವಾಗದಂತೆ ಎಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ
ನೀಡಿದರು.

ಸಹಾಯಕ ಕೃಷಿ ನಿರ್ಧೇಶಕಿ ಸೌಮ್ಯಶ್ರೀ, ತೋಟಗಾರಿಕೆ
ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜು ಇದ್ದರು. ಅರ್ಹ ಫಲಾನುಭವಿಗಳಿಗೆ ಸೈಕಲ್ ಗ್ರೀಡ್ ವಿತರಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು