ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಕ್ರೀಡಾಪಟುಗಳ ಆಯ್ಕೆಗೆ ಚಾಲನೆ

Published 28 ಏಪ್ರಿಲ್ 2024, 5:27 IST
Last Updated 28 ಏಪ್ರಿಲ್ 2024, 5:27 IST
ಅಕ್ಷರ ಗಾತ್ರ

ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪ್ರಸಕ್ತ ಸಾಲಿನ ರಾಜ್ಯದ ವಿವಿಧ ಕ್ರೀಡಾ ವಸತಿ ಶಾಲೆ, ನಿಲಯಕ್ಕೆ ಹಿರಿಯರ ವಿಭಾಗದ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಶನಿವಾರದಿಂದ ಆರಂಭವಾಗಿದೆ.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಆಯ್ಕೆ ಶಿಬಿರ ಏರ್ಪಡಿಸಲಾಗಿದೆ. ಮೇ 3ರ ವರೆಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಓಟ ಒಳಗೊಂಡಂತೆ ಅಥ್ಲೆಟಿಕ್ಸ್‌ ವಿಭಾಗದಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ರಾಜ್ಯದ ವಿವಿಧ ಕ್ರೀಡಾ ಶಾಲೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಈಗಾಗಲೇ ತಾಲ್ಲೂಕು, ಜಿಲ್ಲೆ, ವಿಭಾಗ ಮಟ್ಟದಲ್ಲಿ ಆಯ್ಕೆಯಾದವರು ಕೊನೆಯ ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ.

10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. ಧಾರವಾಡ, ಬೆಳಗಾವಿ, ಹುಬ್ಬಳ್ಳಿ, ಮೈಸೂರು, ಮೈಸೂರು, ಮಂಡ್ಯ, ಹಾಸನ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 124 ಬಾಲಕರು, 77 ಬಾಲಕಿಯರು ಶಿಬಿರಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳ 12 ಜನ ತರಬೇತುದಾರರು ಶಿಬಿರದಲ್ಲಿ ಕ್ರೀಡಾಪಟುಗಳ ಆಯ್ಕೆಗೆ ಶ್ರಮಿಸಲಿದ್ದಾರೆ.

ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಶನಿವಾರ ಆರಂಭವಾದ ಆಯ್ಕೆ ಶಿಬಿರದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳು
ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಶನಿವಾರ ಆರಂಭವಾದ ಆಯ್ಕೆ ಶಿಬಿರದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳು

ಜಿಲ್ಲಾ ಕ್ರೀಡಾಂಗಣದಲ್ಲಿ ಏ. 18ರಿಂದ 24ರ‌ ವರೆಗೆ ಕಿರಿಯರ ವಿಭಾಗದ ಆಯ್ಕೆ ಪ್ರಕ್ರಿಯೆ ನಡೆಯಿತು. ಸುಮಾರು 210 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳು ಉಳಿದುಕೊಳ್ಳಲು ಬೇಕಾದ ಎಲ್ಲ ರೀತಿಯ ಸೌಲಭ್ಯಗಳನ್ನು ಮಾಡಲಾಗಿದೆ. ಊಟ, ಅಭ್ಯಾಸಕ್ಕೆ ವ್ಯವಸ್ಥೆ ಕಲ್ಪಿಸಿದೆ. ಪೋಷಕರು ತಮ್ಮ ಮಕ್ಕಳನ್ನು ಕ್ರೀಡಾಂಗಣದಲ್ಲಿ ಬಿಟ್ಟು ಹೋಗುತ್ತಿದ್ದ ದೃಶ್ಯಗಳು ಶನಿವಾರ ಕಂಡು ಬಂದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT