ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಬ್ಬಿ: ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗೆ ಚಾಲನೆ

Published 17 ಆಗಸ್ಟ್ 2024, 14:23 IST
Last Updated 17 ಆಗಸ್ಟ್ 2024, 14:23 IST
ಅಕ್ಷರ ಗಾತ್ರ

ಗುಬ್ಬಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲವನ್ನು ಸವಾಲಾಗಿ ಸ್ವೀಕರಿಸಿದಲ್ಲಿ ಮಾತ್ರ ಗುರಿ ತಲುಪಲು ಸಾಧ್ಯ ಎಂದು ತಹಶೀಲ್ದಾರ್ ಆರತಿ ಬಿ. ತಿಳಿಸಿದರು.

ಪಟ್ಟಣದಲ್ಲಿ ಶನಿವಾರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು.

ಶಿಕ್ಷಣದಿಂದ ಮಾತ್ರ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯವಿರುವುದರಿಂದ ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾದೇವಿ ಮಾತನಾಡಿ, ಸರ್ಕಾರಿ ಶಾಲಾ, ಕಾಲೇಜುಗಳಲ್ಲಿಯೂ ಗುಣಮಟ್ಟದ ಶಿಕ್ಷಣ ಲಭ್ಯವಾಗುತ್ತಿದೆ. ವಿದ್ಯಾರ್ಥಿಗಳು ಯಾವುದೇ ಕೀಳರಿಮೆ ಇಟ್ಟುಕೊಳ್ಳದೆ ಓದಿನ ಕಡೆ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಪ್ರಾಧ್ಯಾಪಕ ಒ. ನಾಗರಾಜ್ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜೊತೆ ಸಾಹಿತ್ಯ, ಕಲೆ ಹಾಗೂ ಆಟಗಳತ್ತಲೂ ಗಮನಹರಿಸಿದಲ್ಲಿ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದರು.

ಕಲೆ, ಸಾಹಿತ್ಯದ ಅಭಿರುಚಿ ರೂಢಿಸಿಕೊಂಡಲ್ಲಿ, ಬದುಕಿನ ಸ್ವಾಧ ಅನುಭವಿಸಲು ಸಾಧ್ಯ. ವಿದ್ಯಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ನಲಿವಿನಿಂದ ಕಲಿಕೆಯತ್ತ ಗಮನ ಹರಿಸಬೇಕು ಎಂದು ತಿಳಿಸಿದರು.

ಪ್ರಾಂಶುಪಾಲ ಮಂಜುನಾಥ್ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿಯೇ ಇರುವ ಗ್ರಂಥಾಲಯ ಬಳಸಿಕೊಳ್ಳಬೇಕು. ಉಪನ್ಯಾಸಕರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಾ, ಸಮಾಜದಲ್ಲಿ ಎಲ್ಲರೂ ಗೌರವಿಸುವಂತಹ ಸ್ಥಾನ ಪಡೆಯುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕ ಯತೀಶ್, ಲೋಕೇಶ್, ಎಸ್‌ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು, ಉಪನ್ಯಾಸಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT