ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೆಟ್‍ಬಾಲ್ ಚಾಂಪಿಯನ್‍ಶಿಪ್‌ಗೆ ಚಾಲನೆ: ಕ್ರೀಡೆ ಏಕತೆಯ ಸಂಕೇತ ಎಂದ ಜಿ.ಪರಮೇಶ್ವರ

Published 13 ಮಾರ್ಚ್ 2024, 6:08 IST
Last Updated 13 ಮಾರ್ಚ್ 2024, 6:08 IST
ಅಕ್ಷರ ಗಾತ್ರ

ತುಮಕೂರು: ಸಿದ್ಧಾರ್ಥ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್ (ಸಾಹೇ) ವತಿಯಿಂದ ಹಮ್ಮಿಕೊಂಡಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ ನೆಟ್‍ಬಾಲ್‌ ಚಾಂಪಿಯನ್‍ಶಿಪ್‌ಗೆ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮೈದಾನದಲ್ಲಿ ಮಂಗಳವಾರ ಚಾಲನೆ ದೊರೆಯಿತು.

ಅಖಿಲ ಭಾರತ ನೆಟ್‍ಬಾಲ್‌ ಫೆಡರೇಷನ್‌ ಸಹಯೋಗದಲ್ಲಿ ಚಾಂಪಿಯನ್‌ಶಿಪ್‌ ಆಯೋಜಿಸಲಾಗಿದೆ. ಮಧ್ಯಪ್ರದೇಶದ ಏಕಲವ್ಯ ವಿ.ವಿ, ತುಮಕೂರು ವಿ.ವಿ, ರಾಣಿ ಚೆನ್ನಮ್ಮ, ಬೆಂಗಳೂರು, ಕರ್ನಾಟಕ, ದಾವಣಗೆರೆ, ಮಂಗಳೂರು ವಿ.ವಿ, ಕೇರಳದ ಮಹಾತ್ಮ ಗಾಂಧಿ ವಿ.ವಿ, ಶಾತವಾಹನ ವಿ.ವಿ ಸೇರಿದಂತೆ ದೇಶದ ವಿವಿಧ ರಾಜ್ಯಗಳ ವಿಶ್ವವಿದ್ಯಾಲಯಗಳು ಪಥ ಸಂಚಲನದಲ್ಲಿ ಭಾಗವಹಿಸುವ ಮೂಲಕ ಕ್ರೀಡಾಕೂಟಕ್ಕೆ ಮೆರುಗು ತಂದವು.

‘ಸಾಹೇ’ ವಿಶ್ವವಿದ್ಯಾಲಯ ಕುಲಾಧಿಪತಿ ಜಿ.ಪರಮೇಶ್ವರ ಚಾಂಪಿಯನ್‌ಶಿಪ್‌ಗೆ ಚಾಲನೆ ನೀಡಿ ಮಾತನಾಡಿ, ‘ವಿ.ವಿಯಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ 53 ತಂಡಗಳು ಭಾಗವಹಿಸಿದ್ದು, ನಾಲ್ಕು ತಂಡಗಳಿಗೆ ಬಹುಮಾನ ನೀಡಲಾಗುತ್ತದೆ ಎಂದರು.

‘ಕ್ರೀಡೆ ಎಲ್ಲರನ್ನು ಒಂದೆಡೆ ಸೇರಿಸುತ್ತದೆ. ಇದು ಏಕತೆಯ ಸಂಕೇತವಾಗಿದೆ. ಕ್ರೀಡೆಯಲ್ಲಿ ಸೋಲು– ಗೆಲುವು ಸಹಜ. ಭಾಗವಹಿಸುವುದು ಬಹಳ ಮುಖ್ಯ’ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಡಿವೈಎಸ್‌ಪಿ ಕೆ.ಆರ್‌.ಚಂದ್ರಶೇಖರ್‌, ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಸದಸ್ಯೆ ಕನ್ನಿಕಾ ಪರಮೇಶ್ವರ, ಸಾಹೇ ವಿ.ವಿ ಕುಲಪತಿ ಕೆ.ಬಿ.ಲಿಂಗೇಗೌಡ, ರಿಜಿಸ್ಟ್ರಾರ್‌ ಎಂ.ಝೆಡ್.ಕುರಿಯನ್, ಸಿದ್ಧಾರ್ಥ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಸಾಣೆಕೊಪ್ಪ, ದಂತ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಪ್ರವೀಣ್‌ ಬಿ.ಕುಡ್ವ, ಎಸ್‍ಎಸ್‍ಐಆರ್‌ಎಂಎಸ್ ಪ್ರಾಂಶುಪಾಲ ಡಾ.ದಿವಾಕರ್, ಎಸ್‌ಎಸ್‌ಐಟಿ ಪ್ರಾಂಶುಪಾಲ ಎಂ.ಎಸ್.ರವಿಪ್ರಕಾಶ್‌ ಮೊದಲಾದವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT