ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ದೂರ ತರಂಗ ಶಿಕ್ಷಣಕ್ಕೆ ಚಾಲನೆ

Last Updated 7 ಏಪ್ರಿಲ್ 2021, 3:30 IST
ಅಕ್ಷರ ಗಾತ್ರ

ಮಧುಗಿರಿ: ಆಧುನಿಕ ತಂತ್ರಜ್ಞಾನದ ಮೂಲಕ ಪ್ರತಿಯೊಬ್ಬರಿಗೂ ಶಿಕ್ಷಣ ನೀಡಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದ
ಲು ಸಾಧ್ಯ ಎಂದು ಪಾವಗಡದ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಮಹಾರಾಜ್ ತಿಳಿಸಿದರು.

ತಾಲ್ಲೂಕಿನ ಗಿಡದಾಗಲಹಳ್ಳಿ ಸರ್ಕಾರಿ ಪ್ರೌಡಶಾಲೆ ಆವರಣದಲ್ಲಿ ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್, ಪಾವಗಡದ ರಾಮಕೃಷ್ಣ ಸೇವಾಶ್ರಮ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ದೂರತರಂಗ ಶಿಕ್ಷಣ
ಯೋಜನೆ ಉದ್ಘಾಟಿಸಿ ಮಾತನಾಡಿದರು.

ಉತ್ತಮ ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿದಾಗ ದೇಶ ಅಭಿವೃದ್ಧಿ ಹೊಂದುತ್ತದೆ ಎಂದರು.

ಈ ಯೋಜನೆಯಲ್ಲಿ ಪ್ರೊಜೆಕ್ಟರ್, ಡಿಜಿಟಲ್ ಸ್ಕ್ರೀನ್ ಮೂಲಕ ಪಾಠ ಪ್ರವಚನ ನಡೆಸುವುದರಿಂದ ವಿಧ್ಯಾರ್ಥಿಗಳು ಏಕಾಗ್ರತೆಯಿಂದ ವಿಷಯ ಅರ್ಥೈಸಿಕೊಳ್ಳುತ್ತಾರೆ ಎಂದರು.

ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ಸರ್ಕಾರಿ ಶಾಲೆಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಕರು ಬಹಳ ಆಸಕ್ತರಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದವರು ಉತ್ತಮ ಸ್ಥಾನದಲ್ಲಿದ್ದಾರೆ. ಪೋಷಕರ ಕಷ್ಟ- ಕಾರ್ಪಣ್ಯ ಅರಿತು ವಿದ್ಯಾರ್ಥಿಗಳು ಉತ್ತಮವಾದ ವಿದ್ಯಾಭ್ಯಾಸ ಮಾಡುವ ಮೂಲಕ ಉನ್ನತ ಮಟ್ಟದ ಅಧಿಕಾರಿಗಳಾಗಬೇಕು ಎಂದರು.

ಡಿಡಿಪಿಐ ಎಂ.ರೇವಣ್ಣ ಸಿದ್ದಪ್ಪ ಮಾತನಾಡಿ, ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಸ್ವಾಮಿ ಜಪಾನಂದಜೀ ಮಹಾರಾಜ್ ಶ್ರಮಿಸುತ್ತಿದ್ದಾರೆ. ಅವರಿಗೆ ಮತ್ತಷ್ಟು ಸಹಕಾರ ನೀಡಬೇಕು. ತಾಲ್ಲೂಕಿನಲ್ಲಿ ದೂರ ತರಂಗ ಶಿಕ್ಷಣಕ್ಕೆ 20 ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಲಾಗಿದೆ ಎಂದರು.

ಜಿ.ಪಂ. ಚೌಡಪ್ಪ ಮಾತನಾಡಿ, ಶಿಕ್ಷಣದಿಂದಲೇ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಆದ್ದರಿಂದ ಶಿಕ್ಷಣಕ್ಕೆ ಪ್ರತಿಯೊಬ್ಬರು ಒತ್ತು ನೀಡಬೇಕು ಎಂದು ತಿಳಿಸಿದರು.

ತಾ.ಪಂ. ಸದಸ್ಯ ಎಚ್.ಆರ್.ದೊಡ್ಡಯ್ಯ, ರಂಗಾಪುರ ಗ್ರಾ.ಪಂ ಅಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷ ಕಾಮರಾಜು, ಪಿಡಿಒ ಹೊನ್ನೇಶಪ್ಪ, ಬಿಇಒ ನಂಜುಂಡಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ಕುಮಾರ್, ದೇವರಾಜ್, ಸಾಕಮ್ಮ, ರಂಗನಾಥಪ್ಪ, ನಾಗೇಶ್ ಪ್ರಶಾಂತ್, ಎಸ್‌ಡಿಎಂಸಿ ಅಧ್ಯಕ್ಷ ಶೇಖರಯ್ಯ, ತಂತ್ರಜ್ಞ ಹರಿಪ್ರಸಾದ್, ಶಿಕ್ಷಣ ಸಂಯೋಜಕರಾದ ಪ್ರಾಣೇಶ್, ಹೇಮಲತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT