ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಿಪಟೂರು | ಮಾದಕ ವ್ಯಸನ ಮುಕ್ತ ಅಭಿಯಾನ

Published 27 ಜೂನ್ 2024, 13:19 IST
Last Updated 27 ಜೂನ್ 2024, 13:19 IST
ಅಕ್ಷರ ಗಾತ್ರ

ತಿಪಟೂರು: ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಣೆ ವಿರುದ್ಧ ಪ್ರಾಂಶುಪಾಲ ಎಂ.ಡಿ.ಶಿವಕುಮಾರ್ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ನಶಾಮುಕ್ತ ಭಾರತ ಅಭಿಯಾನದಡಿ ಎಲ್ಲರೂ ಒಗ್ಗೂಡಿ ಜಿಲ್ಲೆ ಮತ್ತು ರಾಜ್ಯವನ್ನು ಮಾದಕ ವ್ಯಸನದಿಂದ ಮುಕ್ತಗೊಳಿಸಲು ಧೃಡ ನಿರ್ಧಾರ ತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪೊಲೀಸ್‌ ಅಧಿಕಾರಿ ಕೃಷ್ಣೇಗೌಡ ಮಾತನಾಡಿ, ವಿದ್ಯಾರ್ಥಿ ಸಮೂಹ ಈ ದೇಶದ ಶಕ್ತಿ. ಸಮಾಜ ಮತ್ತು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಕೊಡುಗೆ ನೀಡುತ್ತಿದೆ. ಮಾದಕ ವ್ಯಸನದಿಂದ ದೇಶಕ್ಕೆ ದೊಡ್ಡ ಸವಾಲು ಎದುರಾಗಿದೆ. ಯುವಶಕ್ತಿ ಗರಿಷ್ಠ ಸಂಖ್ಯೆಯಲ್ಲಿ ಮಾದಕ ವ್ಯಸನ ಮುಕ್ತ ಅಭಿಯಾನಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು.

ಮಾದಕ ವಸ್ತುಗಳಾದ ಗಾಂಜಾ, ಅಫೀಮು, ಹೆರಾಯಿನ್, ಎಲ್‌ಎಸ್‌ಡಿ, ಕೊಕೇನ್‌ ಮೊದಲಾದವುಗಳ ಚಟಕ್ಕೆ ದಾಸರಾಗಿ, ಆರೋಗ್ಯವನ್ನು ಹಾಳುಮಾಡಿಕೊಳ್ಳುವುದರ ಜೊತೆಗೆ ಅಪರಾಧಿ ಕೃತ್ಯಗಳಲ್ಲಿ ತೊಡಗಿಕೊಂಡು, ದೇಶದ ಭವಿಷ್ಯಕ್ಕೆ ಕಂಟಕವಾಗಿದ್ದಾರೆ ಎಂದರು.

ದೈಹಿಕ ಶಿಕ್ಷಣ ಉಪನ್ಯಾಸಕ ಷಡಕ್ಷರಪ್ಪ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT