ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳಮೀಸಲಾತಿ ಜಾರಿಗೆ ಆಗ್ರಹ

ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಧರಣಿ
Last Updated 7 ಸೆಪ್ಟೆಂಬರ್ 2020, 13:49 IST
ಅಕ್ಷರ ಗಾತ್ರ

ತುಮಕೂರು: ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆನಿರ್ಣಯ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಧರಣಿ ನಡೆಸಿದರು.

ಸಮಿತಿಯು ರಾಜ್ಯದಾದ್ಯಂತ ಜಿಲ್ಲಾಧಿಕಾರಿ ಕಚೇರಿ ಎದುರು ಏಕಕಾಲದಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿತ್ತು. ಈ ಪ್ರಯುಕ್ತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯು ಸಮರ್ಪಕವಾಗಿ ಹಂಚಿಕೆಯಾಗಿಲ್ಲ. ನೊಂದ ಜನಸಮುದಾಯಗಳ ಕೂಗನ್ನು ಸರ್ಕಾರಗಳು ಆಲಿಸಬೇಕು. ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ಸೂಕ್ತವಾದ ನಿರ್ಣಯ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಸಮಿತಿ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ, ‘ಸುಪ್ರೀಂಕೋರ್ಟ್ ಪ್ರಕಾರ ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರವು ರಾಜ್ಯ ಸರ್ಕಾರಗಳಿಗೆ ಇದೆ. ರಾಜ್ಯದ ಶಾಸನಸಭೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಒಳಮೀಸಲಾತಿ ವರ್ಗೀಕರಣ ಮಾಡುವ ಅಧಿಕಾರವಿದೆ ಎಂದು ತೀರ್ಪು ನೀಡಿದೆ. ಈ ತೀರ್ಪಿನಿಂದ ಒಳಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಇದ್ದ ಅಡೆತಡೆಗಳು ಮುಕ್ತವಾಗಿವೆ’ ಎಂದರು.

ಮಾದಿಗ ಸಮುದಾಯವು ರಾಜಕೀಯ, ಶೈಕ್ಷಣಿಕ, ಔದ್ಯೋಗಿಕ, ಸಾಮಾಜಿಕವಾಗಿ ತೀರಾ ಹಿಂದುಳಿದಿದೆ. ಸಮುದಾಯದವರು ಕಷ್ಟದ ಬದುಕು ಸಾಗಿಸುತ್ತಿದ್ದಾರೆ. 25 ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಮಾದಿಗರ ಮೇಲೆ ಈಗಲೂ ಶೋಷಣೆ ನಡೆಯುತ್ತಿದೆ. ಇದರಿಂದ ಸಮುದಾಯ ದುರ್ಬಲಗೊಂಡಿದೆ ಎಂದು ಹೇಳಿದರು.

ಪ್ರತಿಭಟನೆ ನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಕೇಬಲ್ ರಘುಕುಮಾರ್, ಸಿ.ಕೆ.ತಿಪ್ಪೇಸ್ವಾಮಿ, ಲಕ್ಷ್ಮಿಕಾಂತ್, ಕೊಟ್ಟಶಂಕರ್, ದೊಡ್ಡೇರಿ ಕಣಿಮಯ್ಯ, ನರಸಯ್ಯ, ಹರೀಶ್‍ಗೌಡ, ಪಾವಗಡ ಪೆದ್ದಣ್ಣ, ಗಂಗಾಧರ್, ಚಿ.ನಾ.ಹಳ್ಳಿ ಕೆಂಚಪ್ಪ, ತುರುವೇಕೆರೆ ಜುಂಜಪ್ಪಸ್ವಾಮಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT