ವಾಹನಗಳನ್ನು ಮನಬಂದಂತೆ ಚಾಲನೆ ಮಾಡುತ್ತಿರುವುದರಿಂದ ಮಹಿಳೆಯರು ಮತ್ತು ಮಕ್ಕಳ ಓಡಾಟಕ್ಕೆ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
ಮನೋಹರ್ ಮಧುಗಿರಿ
ಸಂಚಾರ ನಿಯಮಗಳ ಪಾಲಿಸಬೇಕು ಎಂಬುದು ಮಾತಿಗೆ ಸೀಮಿತವಾಗಿದೆ. ಆದರೆ ವಾಸ್ತವವಾಗಿ ಸಂಚಾರ ನಿಯಮ ಪಾಲನೆಯಾಗುತ್ತಿಲ್ಲ. ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
ರಾಜೇಶ್ ಮಧುಗಿರಿ
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಾಹನಗಳನ್ನು ಕ್ರಮಬದ್ಧವಾಗಿ ನಿಲುಗಡೆ ಮಾಡದೆ ಸಂಚಾರ ನಿಯಮವನ್ನು ಗಾಳಿ ತೂರಿದ್ದಾರೆ. ಪಾದಚಾರಿಗಳು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಒತ್ತುವರಿ ತೆರವುಗೊಳಿಸಬೇಕು.