ಶನಿವಾರ, ಆಗಸ್ಟ್ 24, 2019
23 °C

ಹೇಮಾವತಿ ನಾಲಾಕ್ಕೆ ಹರಿದ ನೀರು

Published:
Updated:

ತುಮಕೂರು: ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ತುಮಕೂರು ಜಿಲ್ಲೆಗೆ ಕುಡಿಯುವ ನೀರು ಪೂರೈಕೆಗೆ ಹೇಮಾವತಿ ಜಲಾಶಯದಿಂದ ಗುರುವಾರ ಹೇಮಾವತಿ ನಾಲಾಕ್ಕೆ ನೀರು ಹರಿಸಲಾಗಿದೆ.

ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ ಆಗುತ್ತಿದ್ದ ಹಿನ್ನೆಲೆಯಲ್ಲಿ ಮತ್ತು ಜಲಾಶಯ ಆಶ್ರಯಿತ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ನಾಲಾಕ್ಕೆ ನೀರು ಹರಿಸಲು ಸರ್ಕಾರ ಆದೇಶ ಹೊರಡಿಸಿತ್ತು. ಆದೇಶದನ್ವಯ ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಬುಗುಡನಹಳ್ಳಿ ಕೆರೆ ಸೇರಿದಂತೆ ಜಿಲ್ಲೆಯ ಕುಡಿಯುವ ನೀರಿನ ಕೆರೆಗಳಿಗೆ ನೀರು ತುಂಬಿಸಲು ಹರಿಸಲಾಗಿದೆ.

ಗುರುವಾರ ಬೆಳಿಗ್ಗೆ ತುಮಕೂರು ಜಿಲ್ಲೆಗೆ ನೀರು ಬಿಡಲಾಗಿದೆ. ಕುಡಿಯುವ ನೀರಿನ ಉದ್ದೇಶಕ್ಕೆ ಕೆರೆಗಳಿಗೆ ನೀರು ತುಂಬಿಸಲು ಏನೇನು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಾಲಾ ಉದ್ದಕ್ಕೂ ಬಿಗಿ ಭದ್ರತೆ ಒದಗಿಸಲಾಗಿದೆ. ಕುಡಿಯುವ ನೀರಿನ ಕೆರೆಗಳಿಗೆ ಬಿಟ್ಟು ಬೇರೆ ಉದ್ದೇಶಕ್ಕೆ ನೀರನ್ನು ಯಾರು ಪಡೆಯಲು ಅವಕಾಶವಿಲ್ಲ’ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಪ್ರಜಾವಾಣಿಗೆ ತಿಳಿಸಿದರು.

Post Comments (+)