ತುಮಕೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾನ ಪ್ರಕ್ರಿಯೆ ಸೋಮವಾರ ಬೆಳಗ್ಗೆ ಆರಂಭವಾಗಿದ್ದು, ನಗರದ ಜೂನಿಯರ್ ಕಾಲೇಜಿನ 4 ಮತಗಟ್ಟೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ರಾತ್ರಿ ಸುರಿದ ಮಳೆಯಿಂದ ಕೆಸರುಗದ್ದೆಯಂತಾಗಿದೆ.

ರಸ್ತೆಯಲ್ಲಿ ನೀರು ನಿಂತಿದ್ದು, ಮತಗಟ್ಟೆಗೆ ತೆರಳಲು ಮತದಾರರು ಪರದಾಡಿದರು.

ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ಸ್ಥಳಕ್ಕೆ ಆಗಮಿಸಿ ರಸ್ತೆಯಲ್ಲಿ ನಿಂತಿದ್ದ ನೀರು ಹೊರ ಹಾಕಿದರು. ಮತ ಹಾಕಲು ಬಂದ ಶಿಕ್ಷಕರು ರಸ್ತೆ ಕಂಡು ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ 5 ಮತಗಟ್ಟೆ ಸೇರಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕುಗಳ 16 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. 4,967 ಪುರುಷರು, 2,758 ಮಹಿಳೆಯರು ಸೇರಿದಂತೆ ಒಟ್ಟು 7,725 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಮತಗಟ್ಟೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.