ಪ್ರತಿಭೆ, ಆಸಕ್ತಿಗೆ ತಕ್ಕಂತೆ ವಿದ್ಯಾಭ್ಯಾಸ: ಡಾ.ಶಾಲಿನಿ ರಜನೀಶ್

7
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ’ಸಂವಾದ ಕಾರ್ಯಕ್ರಮ’

ಪ್ರತಿಭೆ, ಆಸಕ್ತಿಗೆ ತಕ್ಕಂತೆ ವಿದ್ಯಾಭ್ಯಾಸ: ಡಾ.ಶಾಲಿನಿ ರಜನೀಶ್

Published:
Updated:
Deccan Herald

ತುಮಕೂರು: ಮಕ್ಕಳಲ್ಲಿರುವ ಪ್ರತಿಭೆ ಹಾಗೂ ಆಸಕ್ತಿಯನ್ನು ಗುರುತಿಸಿ ಅದಕ್ಕೆ ಸರಿಹೊಂದುವ ವಿದ್ಯಾಭ್ಯಾಸ ನೀಡುವುದರಿಂದ ನಿರುದ್ಯೋಗ ಸಮಸ್ಯೆ ಹೋಗಲಾಡಿಸಬಹುದು ಎಂದು ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅಭಿಪ್ರಾಯಪಟ್ಟರು.

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ’ಸಂವಾದ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು ಶಿಕ್ಷಣದೊಂದಿಗೆ ಯುವಜನರಲ್ಲಿ ಆಧುನಿಕ ಕಾಲಕ್ಕೆ ಅಗತ್ಯವಿರುವ ಕೌಶಲಗಳನ್ನು ಬೆಳೆಸುವತ್ತ ಶಿಕ್ಷಣ ಸಂಸ್ಥೆಗಳು ಮುಂದಾಗಬೇಕು ಎಂದರು.

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಇನ್ನೂ ಶೇ 70ರ ಆಸುಪಾಸಿನಲ್ಲಿದೆ. ಕೌಶಲ ಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರುವುದರಿಂದ ಫಲಿತಾಂಶವನ್ನು ಹೆಚ್ಚಿಸಬಹುದು. ಹಾಗೇ ಯಾವುದೇ ಸ್ಥಳದಲ್ಲಿ ಯಾವುದೇ ಜ್ಞಾನ ಸಂಪನ್ಮೂಲವನ್ನು ಬಳಸಿಕೊಳ್ಳುವಂತಹ ಡಿಜಿಟಲ್ ಗ್ರಂಥಾಲಯದ ಯೋಜನೆಯೊಂದು ಮುಂದಿನ ಮೂರು ತಿಂಗಳೊಳಗೆ ಜಾರಿಗೆ ಬರಲಿದೆ ಎಂದು ತಿಳಿಸಿದರು.

ನಿವೃತ್ತ ಡಿ.ಜಿ.ಪಿ ಶ್ರೀಕುಮಾರ್ ಮಾತನಾಡಿ, ’ಸ್ಮಾರ್ಟ್‌ಸಿಟಿ ಎಂದರೆ ನಗರವು ಕಣ್ಣಿಗೆ ಸುಂದರವಾಗಿ ಕಾಣಲು ಮಾಡುವ ಯೋಜನೆ. ಈ ಯೋಜನೆ ಫಲಿಸಬೇಕಾದರೆ ಎಲ್ಲರ ಸಹಕಾರ ಬೇಕು. ಪ್ರತಿಯೊಂದು ಸ್ಥಳವು ಸುಂದರವಾಗಬೇಕು. ಅದರ ಜೊತೆಗೆ ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡಬೇಕು’ ಎಂದರು.

ಸ್ಮಾರ್ಟ್‌ಸಿಟಿ ಎಂದರೆ ಕೇವಲ ನಗರವನ್ನು ಸುಂದರವಾಗಿ ಕಾಣುವುದೊಂದೇ ಅಲ್ಲ. ಅದರ ಜೊತೆ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡುವಂತಹ ಯೋಜನೆ ಇದಾಗಬೇಕು. ನಾಗರಿಕರ ಸಹಭಾಗಿತ್ವದೊಂದಿಗೆ ನಗರವನ್ನು ಸ್ವಚ್ಛವಾಗಿಡುವುದು, ಜನಸಾಮಾನ್ಯರಿಗೆ ವಿಶೇಷ ತರಬೇತಿ ನೀಡುವ ಮೂಲಕ ಸ್ವಚ್ಛತೆಯ ಪರಿಕಲ್ಪನೆಯನ್ನು ಅಭಿವೃದ್ಧಿಪಡಿಸುವುದು ಈ ಯೋಜನೆಯ ಭಾಗ ಎಂದು ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವೈ.ಎಸ್.ಸಿದ್ದೇಗೌಡ ಮಾತನಾಡಿ, ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ  ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್‌ನಲ್ಲಿ ತಾರಾಲಯವನ್ನು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.

ಕುಲಸಚಿವ ಪ್ರೊ.ಟಿ.ವಿ.ವೆಂಕಟೇಶ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !