ಗುಬ್ಬಿ: ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಶಕ್ತಿ ಶಿಕ್ಷಕರಿಗೆ ಇದೆ. ಈ ವೃತ್ತಿಯನ್ನು ಜವಾಬ್ದಾರಿಯಿಂದ ನಿರ್ವಹಿಸಿ ಉತ್ತಮ ಸಮಾಜ ಕಟ್ಟಬೇಕು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ನಡೆದ ಡಾ.ರಾಧಾಕೃಷ್ಣನ್ ಜಯಂತಿ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಒಂದೇ ಉತ್ತಮ ಸಾಧನವಾಗಿದೆ. ಸರ್ಕಾರವು ಬಜೆಟ್‌ನಲ್ಲಿ ಹೆಚ್ಚಿನ ಹಣವನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಮೀಸಲಿಡಬೇಕಿದೆ. ಶಿಕ್ಷಣ ಕ್ಷೇತ್ರದಲ್ಲಿ ದೆಹಲಿ ಮಾದರಿಯನ್ನು ಎಲ್ಲ ರಾಜ್ಯಗಳು ಅಳವಡಿಸಿಕೊಂಡರೆ ಪ್ರಗತಿ ಕಾಣಲು ಸಾಧ್ಯ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್ ಮಾತನಾಡಿ, ಶಿಕ್ಷಕ ವೃತ್ತಿಯಿಂದ ದೇಶದ ಅತ್ಯುನ್ನತ ಸ್ಥಾನಕ್ಕೇರಿ ರಾಷ್ಟ್ರಪತಿಯಾದ ಡಾ.ರಾಧಾಕೃಷ್ಣನ್ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ. ಇಷ್ಟಪಟ್ಟು ಕೆಲಸ ಮಾಡುವುದು ಜೀವನದ ಸಾಧನೆಗೆ ಉತ್ತಮ ಮಾರ್ಗ ಎಂದರು.
ತಹಶೀಲ್ದಾರ್ ಬಿ.ಆರತಿ, ಪಪಂ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ, ಸದಸ್ಯರಾದ ಜಿ.ಆರ್.ಶಿವಕುಮಾರ್, ಶಶಿಕುಮಾರ್, ರೇಣುಕಾಪ್ರಸಾದ್, ತಾಪಂ ಇಒ ನರಸಿಂಹಯ್ಯ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ವಿ.ನಾರಾಯಣ್, ಬಿಆರ್‌ಸಿ ಸಿದ್ದಲಿಂಗಸ್ವಾಮಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಯೋಗಾನಂದ್, ಶಿಕ್ಷಕರ ವಿವಿಧ ಸಂಘಗಳ ಪದಾಧಿಕಾರಿಗಳಾದ ಗೊರವಯ್ಯ, ಹುಚ್ಚಯ್ಯ, ನಟರಾಜು, ಲಕ್ಷ್ಮಿ ಕಾಂತರಾಜು, ಬಸಪ್ಪ, ಭೈರಯ್ಯ, ಗಂಗಾಧರ್, ನಟರಾಜು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.