ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಕರ್ತವ್ಯ; ಅಧಿಕಾರಿ, ಸಿಬ್ಬಂದಿಗೆ ಬಸ್: ಡಿಸಿ ಡಾ.ಕೆ.ರಾಕೇಶ್ ಕುಮಾರ್

Last Updated 16 ಏಪ್ರಿಲ್ 2019, 13:41 IST
ಅಕ್ಷರ ಗಾತ್ರ

ತುಮಕೂರು: ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ಹಾಜರಾಗುವ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಅವರು ಕರ್ತವ್ಯ ನಿರ್ವಹಿಸುತ್ತಿರುವ ತಾಲ್ಲೂಕು ಕೇಂದ್ರ ಸ್ಥಾನದ ಸ್ಥಳಗಳಿಂದ ನೇಮಕ ಮಾಡಿದ ವಿಧಾನಸಭಾ ಕ್ಷೇತ್ರಗಳಿಗೆ ತೆರಳಲು ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ತಿಳಿಸಿದ್ದಾರೆ.

ಏ.17ರಂದು ಬೆಳಿಗ್ಗೆ 6ಕ್ಕೆ ಆಯಾ ತಾಲ್ಲೂಕು ಕೇಂದ್ರಗಳಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ವಿಧಾನಸಭಾ ಕ್ಷೇತ್ರವಾರು ಬಸ್ಸುಗಳು ಹೊರಡುವ ಸ್ಥಳದ ವಿವರ ಇಂತಿದೆ.

ತುಮಕೂರು ಗ್ರಾಮಾಂತರ: ವಿಜಯನಗರದ ಸರ್ವೋದಯ ಬಾಲಕಿಯರ ಪ್ರೌಢಶಾಲೆ, ತುಮಕೂರು ನಗರ: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಗುಬ್ಬಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಿಕ್ಕನಾಯಕನಹಳ್ಳಿ: ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜು, ತಿಪಟೂರು: ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ತುರುವೇಕೆರೆ: ಸರ್ಕಾರಿ ಪದವಿಪೂರ್ವ ಕಾಲೇಜು, ಕುಣಿಗಲ್: ಮಹಾತ್ಮಗಾಂಧಿ ಸರ್ಕಾರಿ ಪದವಿಪೂರ್ವ ಕಾಲೇಜು, ಕೊರಟಗೆರೆ: ಸರ್ಕಾರಿ ಪದವಿಪೂರ್ವ ಕಾಲೇಜು, ಶಿರಾ: ಸರ್ಕಾರಿ ಪ್ರಥಮದರ್ಜೆ ಕಾಲೇಜು, ಜ್ಯೋತಿ ನಗರ, ಪಾವಗಡ: ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಮಧುಗಿರಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ನಿಯೋಜಿತ ಮತಗಟ್ಟೆ ಅಧಿಕಾರಿ, ಸಿಬ್ಬಂದಿ ಸಕಾಲಕ್ಕೆ ಹಾಜರಾಗಿ ಚುನಾವಣಾ ಕರ್ತವ್ಯಕ್ಕೆ ತೆರಳಬೇಕು ಎಂದು ಸೂಚಿಸಿದ್ದಾರೆ.

ಉಪಾಹಾರ, ಊಟ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಎಲ್ಲ ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಬೇಕು ಎಂದು ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್‍ಯನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್ ಸೂಚಿಸಿದರು.

ಜಿಲ್ಲಾ ಪಂಚಾಯಿತಿಯ ವಿಡಿಯೊ ಸಂವಾದ ಕೇಂದ್ರದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, ಮತಗಟ್ಟೆಗಳಿಗೆ ಮೂಲ ಸೌಕರ್ಯ ಕಲ್ಪಿಸಿರುವ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಂಗವಿಕಲರನ್ನು ಮತಗಟ್ಟೆ ಕೇಂದ್ರಗಳಿಗೆ ಕರೆದುಕೊಂಡು ಹೋಗಿ ಮತ್ತು ಮನೆಗೆ ಮರಳಿ ತಲುಪಿಸಲು ಉಚಿತ ಆಟೊ ವ್ಯವಸ್ಥೆ, ಮತಗಟ್ಟೆಗಳಲ್ಲಿ ಲಭ್ಯವಿರುವ ವೀಲ್‌ಚೇರ್, ವಿದ್ಯಾರ್ಥಿ ಸ್ವಯಂ ಸೇವಕರು, ಮತ್ತಿತರ ಮತದಾನದ ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಮಟ್ಟದ ತಾಲ್ಲೂಕು ನೋಡಲ್ ಅಧಿಕಾರಿಗಳು, ತಾಲ್ಲೂಕು ಕೇಂದ್ರಗಳಲ್ಲಿ ಬಿಇಒ, ಸಿಡಿಪಿೊ, ಮಧುಗಿರಿ ಮತ್ತು ತುಮಕೂರು ಡಿಡಿಪಿಐ, ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಸಂವಾದದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT