ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸುಳ್ಳನ್ನು ಸತ್ಯವೆಂದು ನಂಬಿಸುವ ನರೇಂದ್ರ ಮೋದಿ’

Published 17 ಏಪ್ರಿಲ್ 2024, 6:20 IST
Last Updated 17 ಏಪ್ರಿಲ್ 2024, 6:20 IST
ಅಕ್ಷರ ಗಾತ್ರ

ಚೇಳೂರು: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸುಳ್ಳು ಆಶ್ವಾಸನೆ ನೀಡಿ, ಅಧಿಕಾರದ ಗದ್ದುಗೆ ಏರಲು ತವಕಿಸುತ್ತಿದೆ. ಸುಳ್ಳನ್ನು ನಿಜವೆಂದು ನಂಬಿಸುವ ಮೋಡಿಗಾರ ನರೇಂದ್ರ ಮೋದಿ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ವಾಗ್ದಾಳಿ ನಡೆಸಿದರು.

ಹೋಬಳಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ಸರ್ಕಾರ ಉಳ್ಳವರ ಪರವಾಗಿದೆ. ರೈತರ ಬೆಳೆಗಳಿಗೆ, ಹಾಲು, ಮೊಸರು, ಕೃಷಿ ಯಂತ್ರೋಪಕರಣಗಳಲ್ಲಿ, ಬಿತ್ತನೆ ಬೀಜಗಳಲ್ಲಿ, ರಾಸಾಯನಿಕ ಗೊಬ್ಬರಗಳ ಮೇಲೆ ತೆರಿಗೆ ಹೆಚ್ಚಿಸಿದೆ ಎಂದು ಟೀಕಿಸಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಗ್ರಾಮೀಣ ಭಾಗದ ತಾಯಂದಿರ ಮೇಲೆ ಕೆಟ್ಟ ಆರೋಪ ಮಾಡಿರುವುದು ಖಂಡನೀಯ ಎಂದರು.

ಜಿಲ್ಲಾ ಕಾರ್ಯದರ್ಶಿ ಶಕರಾನಂದ್, ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಕೆ.ಆರ್. ವೆಂಕಟೇಶ್, ಕೆ.ಆರ್. ತಾತಯ್ಯ, ಬಿದರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೈಲಾರಯ್ಯ, ಗುರು ರೇಣುಕಾರಾಧ್ಯ, ರಮೇಶ್, ಶಶಿಕಿರಣ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಭಾಗ್ಯಮ್ಮ, ಸಣ್ಣರಂಗಯ್ಯ, ಯತೀಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT