ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಚುನಾವಣೆ: ವಿ.ವಿ ತರಗತಿ ಸ್ಥಳಾಂತರ

Published 14 ಏಪ್ರಿಲ್ 2024, 4:51 IST
Last Updated 14 ಏಪ್ರಿಲ್ 2024, 4:51 IST
ಅಕ್ಷರ ಗಾತ್ರ

ತುಮಕೂರು: ಲೋಕಸಭಾ ಚುನಾವಣೆ ಕಾರ್ಯಕ್ಕೆ ವಿಶ್ವವಿದ್ಯಾಲಯ ವಿಜ್ಞಾನ ಕಾಲೇಜು ಕಟ್ಟಡ ಬಳಸಿಕೊಳ್ಳುತ್ತಿದ್ದು, ಕಾಲೇಜಿನಲ್ಲಿ ನಡೆಯಬೇಕಿದ್ದ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳನ್ನು ತಾತ್ಕಾಲಿಕವಾಗಿ ಬೇರೆ ಕಾಲೇಜುಗಳಿಗೆ ಸ್ಥಳಾಂತರಿಸಲಾಗಿದೆ.

ವಿ.ವಿ ವಿಜ್ಞಾನ ಕಾಲೇಜಿನಲ್ಲಿ ನಡೆಯಬೇಕಿದ್ದ ಬಿಸಿಎ, ಬಿವೋಕ್, ಸ್ನಾತಕೋತ್ತರ ರಸಾಯನಶಾಸ್ತ್ರ, ಭೌತಶಾಸ್ತ್ರ ತರಗತಿಗಳನ್ನು ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿಗೆ ಹಾಗೂ ಬಿಎಸ್‌ಸಿ ತರಗತಿಯನ್ನು ಸರ್ವೋದಯ ಪದವಿ ಪೂರ್ವ ಕಾಲೇಜಿಗೆ ಸ್ಥಳಾಂತರ ಮಾಡಲಾಗಿದೆ. ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಹೊಸ ವ್ಯವಸ್ಥೆಯಲ್ಲೇ ತರಗತಿಗಳು ನಡೆಯಲಿವೆ ಎಂದು ಕಾಲೇಜು ಪ್ರಾಂಶುಪಾಲರು ತಿಳಿಸಿದ್ದಾರೆ.

ವಿಜ್ಞಾನ ಕಾಲೇಜಿನ ಪದವಿ ತರಗತಿಗಳು ಏ. 18ರಿಂದ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ಏ. 22ರಿಂದ ಪುನರಾರಂಭಗೊಳ್ಳಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT