ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ: ಸಾರ್ವಜನಿಕರೂ ದೂರು ನೀಡಬಹುದು

Published 19 ಮಾರ್ಚ್ 2024, 3:16 IST
Last Updated 19 ಮಾರ್ಚ್ 2024, 3:16 IST
ಅಕ್ಷರ ಗಾತ್ರ

ತುಮಕೂರು: ಲೋಕಸಭೆ ಚುನಾವಣೆ ಸಮಯದಲ್ಲಿ ‘ಸಿ-ವಿಜಿಲ್’ ಆ್ಯಪ್ ಮೂಲಕ ಸಾರ್ವಜನಿಕರೂ ದೂರು ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗಿದೆ.

ಅಧಿಕಾರಿ, ಸಿಬ್ಬಂದಿಗಳು ಎಲ್ಲೆಡೆ ನಿಗಾ ವಹಿಸುವುದು ಕಷ್ಟಕರ. ಸಾರ್ವಜನಿಕರು ಚಿತ್ರ, ವಿಡಿಯೊ ದಾಖಲಿಸಿ ಸಿ–ವಿಜಿಲ್‌ ಆ್ಯಪ್‌ ಮೂಲಕ ಅಪ್‌ಲೋಡ್ ಮಾಡಿ ದೂರು ನೀಡಬಹುದು. ದೂರು ಬಂದ ತಕ್ಷಣ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಹಾಗೂ ನಗರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಬಿ.ವಿ.ಅಶ್ವಿಜ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.

ನಗರ ವ್ಯಾಪ್ತಿಯಲ್ಲಿ ಒಟ್ಟು 2,64,199 ಮತದಾರರಿದ್ದು, 1,28,877 ಪುರುಷರು, 1,35,297 ಮಹಿಳೆಯರು, 25 ಇತರೆ ಮತದಾರರು ಇದ್ದಾರೆ. ಮೃತಪಟ್ಟವರು, ಎರಡು ಬಾರಿ ನೋಂದಣಿ ಮಾಡಿಕೊಂಡವರು ಸೇರಿದಂತೆ 7,324 ಮಂದಿಯನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ನಗರದಲ್ಲಿ 235 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬ್ಯಾನರ್, ಫ್ಲೆಕ್ಸ್, ಬಂಟಿಂಗ್, ಹೋರ್ಡಿಂಗ್, ಜನಪ್ರತಿನಿಧಿಗಳ ಭಾವಚಿತ್ರ, ಹೆಸರು, ಗೋಡೆಬರಹ ಸೇರಿದಂತೆ ಈವರೆಗೂ ಸುಮಾರು 5 ಸಾವಿರ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಗೆ 21 ಸೆಕ್ಟರ್ ಅಧಿಕಾರಿ, 3 ಎಸ್‍ಎಸ್‍ಟಿ ತಂಡ, 6 ಎಫ್‍ಎಸ್‍ಟಿ ತಂಡ, 1 ವಿವಿಟಿ ತಂಡ, 2 ವಿಎಸ್‍ಟಿ, 1 ವೆಚ್ಚ ತಂಡ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂಖ್ಯೆಗೆ ದೂರು ನೀಡಿ

ನಗರ ವ್ಯಾಪ್ತಿಯಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಅಕ್ರಮಗಳು ಕಂಡು ಬಂದರೆ ದೂರು ನೀಡಲು ನಿಯಂತ್ರಣ ಕೊಠಡಿ ತೆರೆದಿದ್ದು ದೂರು ಸಲ್ಲಿಸಬಹುದಾಗಿದೆ. ದೂರವಾಣಿ ಸಂಖ್ಯೆ 0816-2272200 ಮೊ 9449872599ಕ್ಕೆ ಕರೆ ಮಾಡಿ ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT